ಕಲಬುರಗಿ:ವಿದ್ಯುತ್ ಪಂಪ್ ದುರಸ್ತಿಗೆ ಆಗ್ರಹಿಸಿ ನಗರದ ವಿನೋಬಾ ಭಾವೆ ಬಡಾವಣೆಯ ನಿವಾಸಿಗಳು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ವಿದ್ಯುತ್ ಪಂಪ್ ದುರಸ್ತಿಗೆ ಆಗ್ರಹಿಸಿ ಕಲಬುರಗಿಯಲ್ಲಿ ಪ್ರತಿಭಟನೆ
ಬೇಸಿಗೆ ಆರಂಭವಾಗುತ್ತಿದ್ದಂತೆ ಎಲ್ಲೆಡೆ ನೀರಿನ ಅಭಾವ- ವಿದ್ಯುತ್ ಪಂಪ್ ದುರಸ್ತಿಗೆ ಆಗ್ರಹಿಸಿ ಕಲಬುರಗಿಯಲ್ಲಿ ಪ್ರತಿಭಟನೆ_ ಇದಕ್ಕೆ ತಲೆಕೆಡಿಸಿಕೊಳ್ಳದ ಅಧಿಕಾರಿಗಳ ವಿರುದ್ಧ ರಸ್ತೆ ತಡೆದು ಪ್ರತಿಭಟನೆ.
ರಸ್ತೆ ತಡೆದು ಪ್ರತಿಭಟಿಸುತ್ತಿರುವ ಜನ
ವಿದ್ಯುತ್ ಪಂಪ್ ಹಾಳಾಗಿ ಒಂದು ತಿಂಗಳ ಮೇಲಾದರೂ ಸಂಬಂಧಪಟ್ಟ ಅಧಿಕಾರಿಗಳಾಗಲಿ ಅಥವಾ ಮಹಾನಗರ ಪಾಲಿಕೆ ಸದಸ್ಯರಾಗಲಿ ಇತ್ತ ಕಡೆ ಗಮನಹರಿಸುತ್ತಿಲ್ಲ ಎಂದು ಮಹಿಳೆಯರು ಕೊಡ ಹಿಡಿದು ಪ್ರತಿಭಟನೆ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಬೇಸಿಗೆಯಲ್ಲಿ ನೀರಿನ ಅವಶ್ಯಕತೆ ಹೆಚ್ಚಿದು, ಈ ವೇಳೆಯಲ್ಲೇ ಪಂಪ್ ಹಾಳಾಗಿದ್ದರಿಂದ ಬಡಾವಣೆ ನಿವಾಸಿಗಳ ನೀರಿನ ಬವಣೆ ಹೆಚ್ಚಾಗಿ ಸಮಸ್ಯೆ ತಲೆದೋರಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಮಹಾನಗರ ಪಾಲಿಕೆ ಸದಸ್ಯರು ಕೂಡಲೇ ವಿದ್ಯುತ್ ಪಂಪ್ ದುರಸ್ತಿ ಮಾಡಿಕೊಡಬೇಕೆಂದು ಪಾಲಿಕೆ ಆಯುಕ್ತರಿಗೆ ಮನವಿ ಮೂಲಕ ಒತ್ತಾಯಿಸಿದರು.