ಕಲಬುರಗಿ: ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಪರಿಮಳ ಅಂಬೇಕರ್ ಕೊನೆಗೂ ಸಿಪಿಐ ಮುಖಂಡ ಕನ್ಹಯ್ಯ ಕುಮಾರ್ ಉಪನ್ಯಾಸ ಕಾರ್ಯಕ್ರಮಕ್ಕೆ ಅನುಮತಿ ನೀಡಿದ್ದು, ನಾಳೆ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಕನ್ಹಯ್ಯ ಕುಮಾರ್ ಕಲಬುರಗಿಗೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ವಿದ್ಯಾರ್ಥಿ ಸಂಘಟನೆಗಳಿಂದ ಉಪನ್ಯಾಸ ಕಾರ್ಯಕ್ರಮ ಆಯೋಜನೆ ಮಾಡಿದೆ. ಆದರೆ, ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಹಾಗೂ ಬೀದರ್ ಸಂಸದ ಭಗವಂತ ಖೂಬಾ ಕಾರ್ಯಕ್ರಮಕ್ಕೆ ಅನುಮತಿ ನೀಡದಂತೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯದ ಕುಲಪತಿ ಪರಿಮಳ ಅಂಬೇಕರ್ ಕಾರ್ಯಕ್ರಮಕ್ಕೆ ಕೊಟ್ಟಿದ್ದ ಅನುಮತಿಯನ್ನು ವಾಪಸ್ ಪಡೆದುಕೊಂಡಿದ್ದರು.