ಕರ್ನಾಟಕ

karnataka

ETV Bharat / state

ಕೊರೊನಾ ಸೋಂಕು ತಗುಲಿದ್ದ ಕಲಬುರಗಿಯ ವೈದ್ಯ ಸಂಪೂರ್ಣ ಗುಣಮುಖ! - Physician cure for corona infection

ದೇಶದಲ್ಲಿ ಕೊರೊನಾ ಸೋಂಕಿಗೆ ಮೊದಲು ಕೊನೆಯುಸಿರೆಳೆದ ವೃದ್ಧನ ನೇರ ಸಂಪರ್ಕಕ್ಕೆ ಬಂದಿದ್ದ ವೈದ್ಯರೊಬ್ಬರಲ್ಲಿ ಕೊರೊನಾ ಇರುವುದು ದೃಢಪಟ್ಟಿತ್ತು. ಈಗ ಅವರು ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Physician cure for corona infection
ಕೊರೊನಾ ಸೋಂಕಿನಿಂದ ವೈದ್ಯ ಗುಣಮುಖ

By

Published : Mar 31, 2020, 11:53 PM IST

ಕಲಬುರಗಿ: ಜಿಲ್ಲೆಯ 63 ವರ್ಷದ ವೈದ್ಯ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಮೊದಲು ಕೊರೊನಾ ಸೋಂಕಿಗೆ ಮೃತಪಟ್ಟ ಮಹ್ಮದ್​ ಸಿದ್ದಿಕಿ ಅವರಿಗೆ ಇದೇ ವೈದ್ಯರು ಚಿಕಿತ್ಸೆ ನೀಡಿದ್ದರು. ಆ ವೇಳೆ ಇವರಿಗೂ ಕೊರೊನಾ ಸೋಂಕಿನ ಲಕ್ಷಣ ಕಾಣಿಸಿಕೊಂಡಿತ್ತು. ಪ್ರಯೋಗಾಲಯಕ್ಕೆ ಇವರ ಗಂಟಲು ದ್ರವ ಹಾಗೂ ರಕ್ತದ ಮಾದರಿ ತಪಾಸಣೆಗೆ ಕಳುಹಿಸಿದಾಗ ಕೊರೊನಾ ಸೋಂಕು ದೃಢಪಟ್ಟಿತ್ತು.

ಕೊರೊನಾ ಸೋಂಕಿನಿಂದ ವೈದ್ಯ ಗುಣಮುಖ

ಜಿಲ್ಲೆಯ ಇಎಸ್​ಐಸಿ ಮೆಡಿಕಲ್ ಕಾಲೇಜಿನ ಐಸೋಲೇಷನ್ ವಾರ್ಡ್​ನಲ್ಲಿಟ್ಟು ತೀವ್ರ ನಿಗಾದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆಯ 14 ದಿನಗಳ ನಂತರ ಕೋವಿಡ್-19 ಪರೀಕ್ಷೆ ಮಾಡಿದಾಗ ನೆಗೆಟಿವ್ ವರದಿ ಬಂದಿದೆ.

24 ಗಂಟೆ‌ ನಂತರ‌ ಮತ್ತೊಮ್ಮೆ ಪರೀಕ್ಷಿಸಿದಾಗ ಸಹ ನೆಗೆಟಿವ್ ವರದಿ ಬಂದಿದೆ. ಈಗ ಸಂಪೂರ್ಣ ಗುಣಮುಖರಾಗಿದ್ದಾರೆಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.

ABOUT THE AUTHOR

...view details