ಕಲಬುರಗಿ:ಮನೆ ಕಳ್ಳತನ ಮಾಡುತ್ತಿದ್ದ ಖದೀಮನನ್ನು ಗ್ರಾಮೀಣ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಲಬುರಗಿಯಲ್ಲಿ ಮನೆಗಳ್ಳನ ಬಂಧನ - Kalburgi crime latest news
ಕಲಬುರಗಿಯಲ್ಲಿ ಮನೆಗಳ್ಳತನ ಮಾಡುತ್ತಿದ್ದ ಖದೀಮನನ್ನು ಪೊಲೀಸರು ಬಂಧಿಸಿದ್ದಾರೆ.
Kalburgi
ಕಲಬುರಗಿ ನಗರದ ದೀನ್ ದಯಾಳ್ ಕಾಲೋನಿ ನಿವಾಸಿ ರಾಹುಲ್ ಕಾಂಬಳೆ (23) ಬಂಧಿತ ಆರೋಪಿಯಾಗಿದ್ದು, ಬಂಧಿತನಿಂದ 2 ಲಕ್ಷ, 55 ಸಾವಿರ ಮೌಲ್ಯದ 50 ಗ್ರಾಂ. ಚಿನ್ನಾಭರಣ ಜಪ್ತಿ ಮಾಡಲಾಗಿದೆ.
ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಆರೋಪಿ ರಾಹುಲ್ ಹಗಲಿನಲ್ಲಿ ಬೀಗ ಹಾಕಿದ ಮನೆ ಹಾಗೂ ಅಂಗಡಿಗಳನ್ನು ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.