ಕರ್ನಾಟಕ

karnataka

ETV Bharat / state

ಅಕ್ರಮವಾಗಿ ಗಾಂಜಾ ಬೆಳೆ:  ವ್ಯಕ್ತಿ ಬಂಧನ - ಜಮೀನು

ತನ್ನ ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಗಿಡ ಬೆಳೆದ ಆರೋಪದಲ್ಲಿ ಅಫಜಲಪುರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ganja

By

Published : Jul 24, 2019, 12:15 PM IST

ಕಲಬುರಗಿ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿಯನ್ನು ಅಫಜಲಪುರ ಪೊಲೀಸರು ಬಂಧಿಸಿದ್ದಾರೆ. ಗೌರ(ಕೆ) ಗ್ರಾಮದ ಪ್ರಭು ಜಮಾದಾರ್​ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಪ್ರಭು ತನ್ನ ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಗಿಡ ಬೆಳೆಸಿದ್ದಾನೆಂಬ ಖಚಿತ ಮಾಹಿತಿ ಮೇರೆಗೆ ಪತ್ರಾಂಕಿತ ಅಧಿಕಾರಿ ವೈದ್ಯ ಡಾ. ಸಂಗಮೇಶ ಟಕ್ಕಳಕಿ ಸಮ್ಮುಖದಲ್ಲಿ ದಾಳಿ ನಡೆಸಿದ ಪಿಎಸ್‌ಐ ಮಂಜುನಾಥ ಹೂಗಾರ, ಸಿಬ್ಬಂದಿ ಬೆಂಗಳೂರ ಶರಣು, ಯಲಗೊಂಡ ಹೂಗಾರ, ಶಂಕರ ತಂಡ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿ

ಬಂಧಿತ ಆರೋಪಿಯಿಂದ 10.5 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಈ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ,

ABOUT THE AUTHOR

...view details