ಕರ್ನಾಟಕ

karnataka

ETV Bharat / state

ಮನೆ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳನ ಬಂಧನ - ವಿವಿ ಠಾಣೆಯಲ್ಲಿ ಪ್ರಕರಣ

ಕಲಬುರಗಿ ನಗರದ ವಿವಿಧ ಬಡಾವಣೆಗಳಲ್ಲಿ ಮನೆಗಳಿಗೆ ಕನ್ನ ಹಾಕಿದ್ದ ಗುಲ್ಯ ಎಂಬಾತ ಒಟ್ಟು 14 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಈ ಕುರಿತು ವಿವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

vv
vv

By

Published : Mar 28, 2020, 10:12 AM IST

ಕಲಬುರಗಿ: ಮನೆ ಕಳ್ಳತನ ಮಾಡುತ್ತಿದ್ದ ಖದೀಮನನ್ನು ಬಂಧಿಸಿ ವಿಶ್ವವಿದ್ಯಾಲಯ ಠಾಣೆ ಪೊಲೀಸರು ಜೈಲಿಗೆ ಅಟ್ಟಿದ್ದಾರೆ‌.

ಗುಲಾಬ@ ಗುಲ್ಯಾ (34) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಕಲಬುರಗಿ ನಗರದ ವಿವಿಧ ಬಡಾವಣೆಗಳಲ್ಲಿ ಮನೆಗಳಿಗೆ ಕನ್ನ ಹಾಕಿದ್ದ ಗುಲ್ಯಾ, ಒಟ್ಟು 14 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಕಡೆಗೂ ಬಂಧಿಸಿ ಜೈಲಿಗಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತನಿಂದ 22 ಲಕ್ಷ 78 ಸಾವಿರ ಮೌಲ್ಯದ 545 ಗ್ರಾಂ ಚಿನ್ನಾಭರಣ, 820 ಗ್ರಾಂ ಬೆಳ್ಳಿ ಆಭರಣಗಳನ್ನು ಜಪ್ತಿ ಮಾಡಲಾಗಿದೆ. ಈ ಕುರಿತು ವಿವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details