ಕರ್ನಾಟಕ

karnataka

ಕಲಬುರಗಿ: ಸ್ಥಳ ಮಹಜರು ವೇಳೆ ಲೇಡಿ PSI ಮೇಲೆ ಹಲ್ಲೆ; ಕೊಲೆ ಆರೋಪಿ ಮೇಲೆ ಗುಂಡು ಹಾರಿಸಿದ ಖಾಕಿ

By

Published : Jul 16, 2022, 11:08 AM IST

Updated : Jul 16, 2022, 12:26 PM IST

ಕಲಬುರಗಿಯ ಕಾಂಗ್ರೆಸ್ ಮುಖಂಡನ ಕೊಲೆ ಪ್ರಕರಣದ ಪ್ರಮುಖ ಆರೋಪಿ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ.

police-firing-on-kalaburagi-congress-leader-murder-accused
ಕಲಬುರಗಿ: ಲೇಡಿ ಪಿಎಸ್​ಐ ಮೇಲೆ ಹಲ್ಲೆ, ಕಾಂಗ್ರೆಸ್ ಮುಖಂಡನ ಕೊಲೆ ಆರೋಪಿ ಮೇಲೆ ಪೊಲೀಸ್​​ ಫೈರಿಂಗ್

ಕಲಬುರಗಿ: ಕಾಂಗ್ರೆಸ್ ಮುಖಂಡ ಗಿರೀಶ ಕಂಬಾನೂರ ಕೊಲೆಯ ಪ್ರಮುಖ ಆರೋಪಿ ವಿಜಯ ಹಳ್ಳಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಶಹಬಾದ್ ಪಟ್ಟಣದ ಹೊರವಲಯದಲ್ಲಿ ಗುಂಡಿನ ದಾಳಿ ನಡೆಸಲಾಗಿದ್ದು, ಆರೋಪಿಯ ಬಲಗಾಲಿಗೆ ಗುಂಡೇಟು ತಗುಲಿದೆ.

ಆರೋಪಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಲ್ಲಿ‌ ಪಿಎಸ್ಐ ಸುವರ್ಣಾ ಅವರಿಗೆ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜುಲೈ 11ರಂದು ಶಹಬಾದ್ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡ ಗಿರೀಶ ಕಂಬಾನೂರ ಕೊಲೆ ನಡೆದಿತ್ತು.

ತನಿಖಾಧಿಕಾರಿ ಪ್ರಕಾಶ ಯಾತನೂರ ಮತ್ತು ಪಿಎಸ್ಐ ಸುವರ್ಣಾ

ಪ್ರಕರಣದ ಆರೋಪಿ ವಿಜಯನನ್ನು ಶುಕ್ರವಾರ ಬಂಧಿಸಿದ ಪೊಲೀಸರು, ಇಂದು ಬೆಳಗ್ಗೆ 7-30ರ ಸುಮಾರಿಗೆ ಕೊಲೆಗೆ ಬಳಸಿದ ಮಾರಕಾಸ್ತ್ರವೊಂದನ್ನು ಬಿಸಾಡಿದ ಸ್ಥಳ ಮಹಜರು ನಡೆಸಲು ಕರೆದೊಯ್ದಿದ್ದರು.

ಪೊಲೀಸ್​ ಫೈರಿಂಗ್​ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್ ಮಾಹಿತಿ

ತಾನು ಬಿಸಾಡಿದ ಮಚ್ಚು ತೋರಿಸಿದ ಆರೋಪಿ, ಅದೇ ಮಚ್ಚಿನಿಂದ ಪಿಎಸ್ಐ ಸುವರ್ಣಾ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ತನಿಖಾಧಿಕಾರಿಯಾದ ಚಿತ್ತಾಪುರ ಸಿಪಿಐ ಪ್ರಕಾಶ ಯಾತನೂರ ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿ ವಿಜಯಗೆ ಶರಣಾಗುವಂತೆ ಹೇಳಿದ್ದಾರೆ. ಆದರೂ ತಪ್ಪಿಸಿಕೊಳ್ಳಲು ಯತ್ನ ಮುಂದುವರೆಸಿದಾಗ ಆರೋಪಿಯ ಬಲಗಾಲಿಗೆ ಒಂದು ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.

ಎರಡು ವರ್ಷದ ಹಿಂದೆ ಗಿರೀಶ ಕಂಬಾನೂರ ಅಣ್ಣ ಸತೀಶ ಕೊಲೆಯನ್ನೂ ಕೂಡ ಇದೇ ಆರೋಪಿ ಮಾಡಿದ್ದ. ಕೊಲೆ ನಂತರ ಜೈಲಿನಿಂದಲೇ ಕಂಬಾನೂರ ಕುಟುಂಬಕ್ಕೆ ಬೆದರಿಕೆ ಹಾಕುವುದು ಸೇರಿದಂತೆ ವಿಜಯ ವಿರುದ್ಧ ಒಟ್ಟು 6 ಪ್ರಕರಣಗಳು ದಾಖಲಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್ ತಿಳಿಸಿದ್ದಾರೆ.

ಇದನ್ನೂ ಓದಿ:ಕಾರು ಶೆಡ್​​ ಧ್ವಂಸ ಮಾಡಿ, 2 ತಾಸು ರಸ್ತೆ ತಡೆದ ಕಾಡಾನೆ: ವಿಡಿಯೋ

Last Updated : Jul 16, 2022, 12:26 PM IST

For All Latest Updates

TAGGED:

ABOUT THE AUTHOR

...view details