ಕಲಬುರಗಿ: ಕುಖ್ಯಾತ ರೌಡಿಶೀಟರ್ ಫಯೀಂ ಬೇಗ್ ಮೇಲೆ ಪೊಲೀಸರು ಬೆಳ್ಳಂಬೆಳಗ್ಗೆ ಫೈರಿಂಗ್ ನಡೆಸಿದ್ದಾರೆ. ಫೈರಿಂಗ್ನಲ್ಲಿ ರೌಡಿಶೀಟರ್ ಕಾಲಿಗೆ ಎರಡು ಗುಂಡು ತಾಗಿವೆ.
ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರಿಂದ ರೌಡಿಶೀಟರ್ ಕಾಲಿಗೆ ಗುಂಡೇಟು - Rowdy Sheeter
ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಫಯೀಂನನ್ನು ಬಂಧಿಸಲು ಹೊದಾಗ ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾನೆ. ಈ ವೇಳೆ ಆತ್ಮ ರಕ್ಷಣೆಗಾಗಿ ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆಯಲಾಗಿದೆ.
![ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರಿಂದ ರೌಡಿಶೀಟರ್ ಕಾಲಿಗೆ ಗುಂಡೇಟು Police gun fired to rowdy sheeter fayeem in Kalaburgi](https://etvbharatimages.akamaized.net/etvbharat/prod-images/768-512-8599908-thumbnail-3x2-klb.jpg)
ಕಲಬುರಗಿ ಹೊರವಲಯದ ಕೆಸರಟಗಿ ಗ್ರಾಮದ ಬಳಿ ಘಟನೆ ನಡೆದಿದ್ದು, ಫಯೀಂ ಬೇಗ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲೆಯ ನಾಲ್ಕೈದು ಪೊಲೀಸ್ ಠಾಣೆಗಳಲ್ಲಿ ಈತನ ವಿರುದ್ಧ ಪ್ರಕರಣಗಳಿದ್ದವು. ಹೈದರಾಬಾದ್ನಲ್ಲಿಯೂ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಫಯೀಂನನ್ನು ಬಂಧಿಸಲು ಹೊದಾಗ ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾನೆ.
ಈ ವೇಳೆ ಇನ್ಸ್ಪೆಕ್ಟರ್ ಲಾಲಸಾಬ ಗೌಂಡಿ ಗುಂಡು ಹಾರಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಹೆಡ್ ಕಾನ್ಸ್ಸ್ಟೇಬಲ್ ಅಂಬಾದಾಸ ಮತ್ತು ಕಾನ್ಸ್ಟೇಬಲ್ ರಫೀಕ್ಗೆ ಗಾಯಗಳಾಗಿದ್ದು, ಅವರನ್ನು ಯುನೈಟೆಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಫಯೀಂನನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.