ಸೇಡಂ(ಕಲಬುರಗಿ): ಹೈಟೆಕ್ ವೇಶ್ಯಾವಾಟಿಕೆ ಜಾಲವನ್ನು ಬಯಲು ಮಾಡುವಲ್ಲಿ ಸೇಡಂ ಪೊಲೀಸರು ಯಶಸ್ವಿಯಾಗಿದ್ದು, ಪಟ್ಟಣದ ಬಸ್ ನಿಲ್ದಾಣದ ಎದುರಿನ ಸಾರಾ ಲಾಡ್ಜ್, ಸವೇರಾ ಲಾಡ್ಜ್ನಲ್ಲಿ ಹಾಡಹಗಲೇ ನಡೆಯುತ್ತಿದ್ದ ವೇಶ್ಯಾವಾಟಿಕೆ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಹಲವರನ್ನು ಬಂಧಿಸಿದ್ದಾರೆ.
ಸೇಡಂ: ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್ಗಳ ಮೇಲೆ ದಾಳಿ, 8 ಮಹಿಳೆಯರ ರಕ್ಷಣೆ - ಸೇಡಂನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್ಗಳ ಮೇಲೆ ದಾಳಿ
ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್ಗಳ ಮೇಲೆ ಸೇಡಂ ಪೊಲೀಸರು ದಾಳಿ ನಡೆಸಿದ್ದು, 10 ಮಂದಿ ಪುರುಷರನ್ನು ಬಂಧಿಸಿ 8 ಮಹಿಳೆಯರನ್ನು ರಕ್ಷಿಸಿದ್ದಾರೆ.
ವೇಶ್ಯಾವಾಟಿಕೆ
ಸಿಪಿಐ ರಾಜಶೇಖರ ಹಳಗೋದಿ, ಪಿಎಸ್‌ಐ ನಾನಾಗೌಡ ಮತ್ತು ಅಪರಾಧ ವಿಭಾಗದ ಪಿಎಸ್‌ಐ ಅಯ್ಯಪ್ಪ ಭೀಮವರಂ ತಂಡ ದಾಳಿ ನಡೆಸಿದೆ. ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಎರಡೂ ಲಾಡ್ಜ್ ಮಾಲೀಕರ ಒಳಗೊಂಡು 10 ಜನ ಪುರುಷರನ್ನು ಪೊಲೀಸರು ಬಂಧಿಸಿದ್ದು, 8 ಜನ ಮಹಿಳೆಯರನ್ನು ರಕ್ಷಿಸಿದ್ದಾರೆ.
ವಿಚಾರಣೆ ವೇಳೆ ಬಂಧಿತರು ಕಲಬುರಗಿ ಜಿಲ್ಲೆಯ ವಿವಿಧ ತಾಲೂಕುಗಳಿಗೆ ಸೇರಿದವರು ಎಂದು ತಿಳಿದು ಬಂದಿದೆ. ದಾಳಿ ವೇಳೆ ಎರಡೂ ಲಾಡ್ಜ್ಗಳಲ್ಲಿನ ಡಿವಿಆರ್ ವಶಕ್ಕೆ ಪಡೆಯಲಾಗಿದ್ದು, ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.