ಕರ್ನಾಟಕ

karnataka

ETV Bharat / state

ಕೊರೊನಾ ಸೋಂಕಿಗೆ ಪೊಲೀಸ್ ತರಬೇತಿ ಕೇಂದ್ರದ ಸಿಪಿಐ ಬಲಿ - Kalaburagi Police Training Center

ಇದೇ ವರ್ಷದ ಜನವರಿಯಲ್ಲಿ ನಾಗೇನಹಳ್ಳಿ ಪೊಲೀಸ್ ತರಬೇತಿ ಕೇಂದ್ರಕ್ಕೆ ವರ್ಗಾವಣೆಗೊಂಡಿದ್ದ ಅವರು, ಮೊದಲು ಕಲಬುರಗಿಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಣೆ ಮಾಡಿದ್ದರು..

Police training center CPI victim for corona virus
ಕಲಬುರಗಿ: ಕೊರೊನಾ ಸೋಂಕಿಗೆ ಪೊಲೀಸ್ ತರಬೇತಿ ಕೇಂದ್ರದ ಸರ್ಕಲ್ ಇನ್ಸಪೇಕ್ಟರ್ ಬಲಿ

By

Published : Sep 9, 2020, 5:55 PM IST

Updated : Sep 9, 2020, 8:57 PM IST

ಕಲಬುರಗಿ :ಕೊರೊನಾ ಸೋಂಕಿಗೆ ಜಿಲ್ಲೆಯ ಪೊಲೀಸ್ ತರಬೇತಿ ಕೇಂದ್ರದ ಸರ್ಕಲ್ ಇನ್ಸ್​ಪೆಕ್ಟರ್ ಎಸ್.ಎಂ.ಯಾಳಗಿ ಬಲಿಯಾಗಿದ್ದಾರೆ.

ಕೋವಿಡ್ ಸೋಂಕು ಕಾಣಿಸಿದ ಹಿನ್ನೆಲೆ ಖಾಸಗಿ ಕೋವಿಡ್ ಆಸ್ಪತ್ರೆಯಲ್ಲಿ ಸಿಪಿಐ ಎಸ್.ಎಂ.ಯಾಳಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. ಇದೇ ವರ್ಷದ ಜನವರಿಯಲ್ಲಿ ನಾಗೇನಹಳ್ಳಿ ಪೊಲೀಸ್ ತರಬೇತಿ ಕೇಂದ್ರಕ್ಕೆ ವರ್ಗಾವಣೆಗೊಂಡಿದ್ದ ಅವರು, ಮೊದಲು ಕಲಬುರಗಿಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಣೆ ಮಾಡಿದ್ದರು.

ಕೊರೊನಾ ಸೋಂಕಿಗೆ ಪೊಲೀಸ್ ತರಬೇತಿ ಕೇಂದ್ರದ ಸಿಪಿಐ ಬಲಿ

ಕೆಲವು ದಿನಗಳ ಹಿಂದೆ ಕೊರೊನಾ ಸೋಂಕು ಕಾಣಿಸಿತ್ತು. ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ ಎಂದು ನಾಗನಹಳ್ಳಿ ಪೊಲೀಸ್ ತರಬೇತಿ ಕೇಂದ್ರದ ಪ್ರಾಂಶುಪಾಲ ಯಡಾ ಮಾರ್ಟಿನ್ ಮಾಹಿತಿ ನೀಡಿದ್ದಾರೆ. ಸಿಪಿಐ ನಿಧನಕ್ಕೆ ಪೊಲೀಸ್ ಸಿಬ್ಬಂದಿ ಕಂಬನಿ ಮಿಡಿದಿದೆ. ಈ ಮೊದಲು ಹಲವಾರು ಪೊಲೀಸರಿಗೆ ಕೊರೊನಾ ಸೋಂಕು ತಗುಲಿತ್ತು. ಆದರೆ, ಬಹುತೇಕ ಸಿಬ್ಬಂದಿ ಗುಣಮುಖರಾಗಿದ್ದರು.

Last Updated : Sep 9, 2020, 8:57 PM IST

ABOUT THE AUTHOR

...view details