ಕಲಬುರಗಿ:ಸೊಳ್ಳೆಗಳು ಕಚ್ಚುವುದರಿಂದ ಡೆಂಗ್ಯೂ ಮತ್ತು ಚಿಕೂನ್‍ಗುನ್ಯಾ ರೋಗಗಳು ಬರುತ್ತಿದ್ದು, ಇದರ ಕುರಿತು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜಾಗೃತಿ ಮೂಡಿಸುವುದು ತುಂಬಾ ಅವಶ್ಯಕವಾಗಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತೆ ಫೌಜಿಯಾ ಬಿ. ತರನ್ನುಮ್ ಹೇಳಿದ್ದಾರೆ.
ಡೆಂಗ್ಯೂ ಬಗ್ಗೆ ಗ್ರಾಮೀಣ-ನಗರ ಪ್ರದೇಶಗಳಲ್ಲಿ ಜಾಗೃತಿ ಅಶ್ಯಕ: ಆಯುಕ್ತೆ ಫೌಜಿಯಾ - undefined
ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜಾಗೃತಿ ಮೂಡಿಸುವುದು ತುಂಬಾ ಅವಶ್ಯಕವಾಗಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತೆ ಫೌಜಿಯಾ ಬಿ. ತರನ್ನುಮ್ ಹೇಳಿದ್ದಾರೆ.
ಮಹಾನಗರ ಪಾಲಿಕೆ
ಮಹಾನಗರ ಪಾಲಿಕೆ ಹೊಸ ಸಭಾಂಗಣದಲ್ಲಿ ಡೆಂಗ್ಯೂ ನಿಯಂತ್ರಣ ಮತ್ತು ಮುಂಜಾಗ್ರತಾ ಕ್ರಮಗಳ ಕುರಿತು ಆಯೋಜಿಸದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಈಗ ಮಳೆಗಾಲವಾದ್ದರಿಂದ ಡೆಂಗ್ಯೂ ಮತ್ತು ಚಿಕೂನ್‍ಗುನ್ಯಾ ಹರಡುವ ಸಾಧ್ಯತೆ ಹೆಚ್ಚಿದೆ. ಮನೆ-ಮನೆಗೆ ಭೇಟಿ ನೀಡಿ ಅಲ್ಲಿನ ಸ್ಥಳ ಪರೀಶಿಲಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.