ಕಲಬುರಗಿ :ನಗರದಲ್ಲಿರುವ ಶ್ರೀಗುರು ಸ್ವತಂತ್ರ ವಿಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ 2019ನೇ ಸಾಲಿನ ಪ್ರತಿಭಾ ಪುರಸ್ಕಾರ ಸಮಾರಂಭ ಏರ್ಪಡಿಸಲಾಗಿತ್ತು.
ಪ್ರತಿಭಾ ಪುರಸ್ಕಾರ ಸಮಾರಂಭ: 150 ವಿದ್ಯಾರ್ಥಿಗಳಿಗೆ ನಗದು ಬಹುಮಾನ - undefined
ನಗರದಲ್ಲಿರುವ ಶ್ರೀಗುರು ಸ್ವತಂತ್ರ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ. 150ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಫಲಕ ನೀಡಿ ಪ್ರೋತ್ಸಾಹ.
![ಪ್ರತಿಭಾ ಪುರಸ್ಕಾರ ಸಮಾರಂಭ: 150 ವಿದ್ಯಾರ್ಥಿಗಳಿಗೆ ನಗದು ಬಹುಮಾನ](https://etvbharatimages.akamaized.net/etvbharat/prod-images/768-512-3775687-thumbnail-3x2-sirsi.jpg)
Kalburgi
ಪ್ರತಿಭಾ ಪುರಸ್ಕಾರ ಸಮಾರಂಭ
ನಗರದ ನೀಲಾಂಬಿಕಾ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಶ್ರೀಗುರು ವಿದ್ಯಾಸಂಸ್ಥೆಯ ಅಧ್ಯಕ್ಷರಾದ ನಳಿನಿ ನಾಯ್ಕ್ ಉದ್ಘಾಟಿಸಿದರು. ಈ ವೇಳೆ ಪ್ರಸಕ್ತ ವರ್ಷದಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಗೌರವ ಧನ ನೀಡಿ ಪುರಸ್ಕರಿಸಲಾಯಿತು. 150ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಫಲಕ ನೀಡಿ ಪ್ರೋತ್ಸಾಹಿಸಿದರು.
ಈ ಕಾರ್ಯಕ್ರಮದಲ್ಲಿ ಡಿವೈಎಸ್ಪಿ ಎಸ್. ಎಸ್.ಹುಲ್ಲೂರ್, ಶ್ರೀಗುರು ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ಎ.ವಾಯ್.ನಾಯ್ಕ್ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.