ಕರ್ನಾಟಕ

karnataka

ETV Bharat / state

ಕಲಬುರಗಿಯಲ್ಲಿ ಹೆಚ್ಚಾದ ಸೋಂಕಿತರು: ಕೋವಿಡ್ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳ ಬಳಕೆ

ಕಲಬುರಗಿಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಡ್​​ಗಳ ಕೊರತೆ ಉಂಟಾಗಿದೆ. ಈ ಸಂಬಂಧ ಖಾಸಗಿ ಆಸ್ಪತ್ರೆಗಳನ್ನು ಕೋವಿಡ್ ಚಿಕಿತ್ಸೆಗೆ ಬಳಸಿಕೊಳ್ಳಲು ಜಿಲ್ಲಾಡಳಿತ ನಿರ್ಧರಿಸಿದೆ.

Kalburgi
Kalburgi

By

Published : Jul 24, 2020, 12:39 PM IST

ಕಲಬುರಗಿ: ಕೊರೊನಾ ರೋಗಿಗಳ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿಯೂ ಕೊರೊನಾ ಸೋಂಕಿತರಿಗೆ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸರ್ಕಾರಿ ಆಸ್ಪತ್ರೆಗಳು ಸೋಂಕಿತರಿಂದ ತುಂಬಿ ಹೋಗಿದೆ. ಈ ಹಿನ್ನೆಲೆಯಲ್ಲಿ ನಗರದ ಧನ್ವಂತರಿ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯಾಗಿ ಘೋಷಣೆ ಮಾಡಿ ಜಿಲ್ಲಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ.

ಕೋವಿಡ್ ಸೋಂಕಿತರಿಗೆ ಈ ಆಸ್ಪತ್ರೆಯಲ್ಲಿಯೂ ಚಿಕಿತ್ಸೆ ಸಿಗಲಿದ್ದು, ಬಸವೇಶ್ವರ ಆಸ್ಪತ್ರೆಯಲ್ಲಿಯೂ ಕೆಲ ವಿಭಾಗಗಳನ್ನು ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಬಳಕೆ ಮಾಡಲಾಗುತ್ತಿದೆ.

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3,370ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 229 ಜನರಿಗೆ ಸೋಂಕು ದೃಢಪಟ್ಟಿದ್ದು, ಒಟ್ಟು 1,426 ಆ್ಯಕ್ಟಿವ್ ಕೇಸ್ ಗಳಿವೆ.

ABOUT THE AUTHOR

...view details