ಕಲಬುರಗಿ:ಫೆಬ್ರವರಿ 5, 6 ಹಾಗೂ 7 ರಂದು ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ಬುಧವಾರ ಚಿಂಚೋಳಿ ಶಾಸಕ ಅವಿನಾಶ್ ಜಾಧವ್ ಬಿಡುಗಡೆ ಮಾಡಿದರು.
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬರದ ಸಿದ್ಧತೆ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಜಿಲ್ಲಾಧಿಕಾರಿ ಶರತ್ ಬಿ ಮತ್ತು ಸಾಂಸ್ಕೃತಿಕ ಹಾಗೂ ಮೆರವಣಿಗೆ ಸಮಿತಿ ಅಧ್ಯಕ್ಷ ಚಿಂಚೋಳಿ ಶಾಸಕ ಅವಿನಾಶ್ ಜಾಧವ್ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.
ಮೂರು ದಿನಗಳ ಕಾಲ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮಗಳ ಹಾಗೂ ಸಮ್ಮೇಳನಾಧ್ಯಕ್ಷರ ಮೆರವಣಿಗೆಯಲ್ಲಿ ಭಾಗವಹಿಸಲಿರುವ ಕಲಾ ತಂಡಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಯಿತು. ಸಮ್ಮೇಳನದ ಸರ್ವಾಧ್ಯಕ್ಷ ಎಚ್.ಎಸ್.ವೆಂಕಟೇಶ ಮೂರ್ತಿ ಅವರ ಕೃಷ್ಣ ಸಖಿ ನೃತ್ಯರೂಪಕ ಪ್ರದರ್ಶನಕ್ಕೆ ಅವಕಾಶ ನೀಡಲಾಗಿದೆ.
ಕನ್ನಡದ ಖ್ಯಾತ ಗಾಯಕರ ಸಮಾಗಮ:
ಸಮ್ಮೇಳನದಲ್ಲಿ ನಡೆಯಲಿರುವ ಸಂಸ್ಕೃತಿಕ ಕಾರ್ಯಕ್ರದಲ್ಲಿ ಖ್ಯಾತ ಗಾಯಕ ವಿಜಯಪ್ರಕಾಶ್ ಸೇರಿದಂತೆ ಹಲವಾರು ಗಾಯಕರು, ಕಲಾವಿದರು ಮುಖ್ಯ ವೇದಿಕೆಯಲ್ಲಿ ಗಾನಸುಧೆ ಹರಿಸಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕಲ್ಯಾಣ ಕರ್ನಾಟಕದ ತಂಡಗಳಿಗೆ ಹೆಚ್ಚಿನ ಆದ್ಯತೆ ನೀಡಿರುವುದು ಗಮನಾರ್ಹ ಸಂಗತಿಯಾಗಿದೆ.