ಕಲಬುರಗಿ :ರಾಜ್ಯದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದರು ಸಿಎಂ ಆಯ್ಕೆ ವಿಚಾರದಲ್ಲಿ ಹೈಕಮಾಂಡ್ ಗೆ ಮುಖ್ಯಮಂತ್ರಿ ಆಯ್ಕೆ ವಿಚಾರ ಕಗ್ಗಂಟಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಮಧ್ಯೆ ಸಿಎಂ ಕುರ್ಚಿಗಾಗಿ ಫೈಟ್ ನಡೆಯುತ್ತಿದೆ. ಇದರ ಬೆನ್ನಲ್ಲೇ ಇದೀಗ ಲಿಂಗಾಯತ ನಾಯಕರನ್ನು ಸಿಎಂ ಮಾಡಬೇಕು ಎನ್ನುವ ಕೂಗು ಕೇಳಿ ಬರಲು ಆರಂಭಿಸಿದೆ.
ಇದನ್ನೂ ಓದಿ :ಶಾಸಕಾಂಗ ಪಕ್ಷದ ನಾಯಕರ ಆಯ್ಕೆ ವಿಚಾರದ ಒಂದು ಸಾಲಿನ ನಿರ್ಣಯವನ್ನು ಸಿದ್ದರಾಮಯ್ಯ ಮಂಡಿಸಿದ್ದಾರೆ: ಸುರ್ಜೇವಾಲ
ರಾಜ್ಯದಲ್ಲಿ ಕಾಂಗ್ರೆಸ್ಗೆ ಲಿಂಗಾಯತ ಸಮುದಾಯ ಬೆಂಬಲಿಸಿದೆ. 39 ಜನ ಲಿಂಗಾಯತ ಶಾಸಕರು ಆಯ್ಕೆಯಾಗಿದ್ದಾರೆ. ಹೀಗಾಗಿ ಲಿಂಗಾಯತ ಮುಖಂಡರಿಗೆ ಸಿಎಂ ಹುದ್ದೆ ನೀಡುವಂತೆ ರಾಜ್ಯ ಲಿಂಗಾಯತ ಸಮಾಜದ ಮುಖಂಡ ಅರುಣ್ ಕುಮಾರ್ ಪಾಟೀಲ್ ಒತ್ತಾಯಿಸಿದ್ದಾರೆ. ಲಿಂಗಾಯತ ಸಮಾಜದ ಈಶ್ವರ ಖಂಡ್ರೆ, ಶಾಮನೂರು ಶಿವಶಂಕರಪ್ಪ, ಎಂ ಬಿ ಪಾಟೀಲ್ ಸೇರಿ ಹಲವರು ಹಿರಿಯ ಮುಖಂಡರಿದ್ದಾರೆ. ಅರ್ಹ ಲಿಂಗಾಯತ ನಾಯಕರಿಗೆ ಸಿಎಂ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.