ಕಲಬುರಗಿ:ಸರಡಗಿ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿಗೆ ಹಾಗೂ ಪೊಲೀಸರಿಗೆ ಅಗತ್ಯ ಸುರಕ್ಷತಾ ಸಲಕರಣೆಗಳನ್ನು ವಿತರಿಸಿದ ಶಾಸಕ ಪ್ರಿಯಾಂಕ್ ಖರ್ಗೆ, ಸರ್ಕಾರ ಸಿಬ್ಬಂದಿ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ವಿಮಾನ ನಿಲ್ದಾಣದ ಸಿಬ್ಬಂದಿಗೆ ಅಗತ್ಯ ಸುರಕ್ಷತಾ ಸಲಕರಣೆ ತಲುಪಿಸಿದ ಶಾಸಕ ಪ್ರಿಯಾಂಕ್ ಖರ್ಗೆ.. - necessary safety equipment
ರಾಜ್ಯ ಸರ್ಕಾರ ಕೊರೊನಾ ವಾರಿಯರ್ಸ್ಗೆ ಅಗತ್ಯ ಸುರಕ್ಷತಾ ಸಲಕರಣೆಗಳನ್ನು ಈ ಕೂಡಲೇ ಒದಗಿಸುವಂತೆ ಆಗ್ರಹಿಸಿ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ..
ಇತ್ತೀಚೆಗೆ ಜಿಲ್ಲೆಯಿಂದ ಬೆಂಗಳೂರಿಗೆ ತೆರಳುವ ಸಂದರ್ಭದಲ್ಲಿ ವಿಮಾನ ನಿಲ್ದಾಣದ ಭದ್ರತೆಗೆ ನಿಯೋಜಿಸಲಾಗಿದ್ದ ಪೊಲೀಸರಿಗೆ ಸುರಕ್ಷತಾ ಸಲಕರಣೆಗಳ ಕೊರತೆಯನ್ನು ಗಮನಿಸಿದ ಶಾಸಕ ಖರ್ಗೆ, ವೈಯಕ್ತಿಕವಾಗಿ 64 ಫೇಸ್‌ಶೀಲ್ಡ್, 250ಎನ್-95 ಮಾಸ್ಕ್, ತಲಾ 5 ಲೀಟರ್ ಇರುವ 2 ಸ್ಯಾನಿಟೈಸರ್ ಕ್ಯಾನ್ ಮತ್ತು 68 ಸ್ಯಾನಿಟೈಸರ್ ಬಾಟಲ್‌ಗಳನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ್ ಅವರ ಮೂಲಕ ಸಿಬ್ಬಂದಿಗೆ ತಲುಪಿಸಿದ್ದಾರೆ.
ರಾಜ್ಯ ಸರ್ಕಾರ ಕೊರೊನಾ ವಾರಿಯರ್ಸ್ಗೆ ಅಗತ್ಯ ಸುರಕ್ಷತಾ ಸಲಕರಣೆಗಳನ್ನು ಈ ಕೂಡಲೇ ಒದಗಿಸುವಂತೆ ಆಗ್ರಹಿಸಿ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.