ಕರ್ನಾಟಕ

karnataka

ETV Bharat / state

ಕೊರೊನಾ ಭೀತಿ ಮಧ್ಯೆ ಕೆಎಎಸ್​ ಪರೀಕ್ಷೆ: ಸರ್ಕಾರದ ನಡೆಗೆ ಪ್ರಿಯಾಂಕ್​ ಖರ್ಗೆ ತೀವ್ರ ಆಕ್ರೋಶ - priyank kharge letter to yadiyurappa

ರಾಜ್ಯದಲ್ಲಿ ಕೊರೊನಾ ವ್ಯಾಪಕವಾಗಿ ಹಬ್ಬುತ್ತಲೇ ಇದೆ. ಆದರೆ ಈ ಮಧ್ಯೆಯೇ ಸರ್ಕಾರ 106 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ಇದೇ ಆ.24 ರಂದು ಪೂರ್ವಭಾವಿ ಪರೀಕ್ಷೆ ನಡೆಸಲು ತೀರ್ಮಾನಿಸಿದೆ. ಈ ನಿರ್ಧಾರವನ್ನು ಪ್ರಶ್ನಿಸಿ ಶಾಸಕ ಪ್ರಿಯಾಂಕ್​ ಖರ್ಗೆ ಸಿಎಂ ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ.

priyank kharge letter to cm yadiyurappa
ಪ್ರಿಯಾಂಕ್​ ಖರ್ಗೆ ಪತ್ರ

By

Published : Aug 21, 2020, 11:52 PM IST

ಕಲಬುರಗಿ: ಕೋವಿಡ್​- 19 ಆತಂಕದ ನಡುವೆಯೇ ಸರ್ಕಾರ ಕೆಎಎಸ್​ ಪರೀಕ್ಷೆ ನಡೆಸಲು ಮುಂದಾಗಿದೆ. ಕೊರೊನಾ ಬಿಕ್ಕಟ್ಟಿನ ನಡುವೆ ಅಭ್ಯರ್ಥಿಗಳು ಹೇಗೆ ಪರೀಕ್ಷೆ ಬರೆಯಬೇಕು ಎಂದು ಆತಂಕಕ್ಕೊಳಗಾಗಿದ್ದಾರೆ ಎಂದು ಶಾಸಕ ಪ್ರಿಯಾಂಕ್​ ಖರ್ಗೆ ಹೇಳಿದ್ದಾರೆ.

ಈ ಕುರಿತು ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಶಾಸಕ ಖರ್ಗೆ, ಈ ಪರೀಕ್ಷೆಯಲ್ಲಿ ಒಟ್ಟು 1,65,258 ಅಭ್ಯರ್ಥಿಗಳು ಹಾಜರಾಗಲಿದ್ದಾರೆ. ಈಗಾಗಲೇ ಸೋಂಕಿನಿಂದ ಬಳಲುತ್ತಿರುವವರು ಹಾಗೂ ಹೋಂ ಕ್ವಾರಂಟೈನ್​ನಲ್ಲಿ ಇ‌ರುವವರು ಪರೀಕ್ಷೆ ಎದುರಿಸಲು ತೊಂದರೆಯಾಗುತ್ತದೆ ಎಂದು ಕರೆ ಮಾಡಿ ತಮ್ಮ ಆತಂಕ ವ್ಯಕ್ತಪಡಿಸಿದ್ದಾರೆ.

ಪ್ರಿಯಾಂಕ್​ ಖರ್ಗೆ ಪತ್ರ

ಜೊತೆಗೆ ಪರೀಕ್ಷೆಗೆ ಹಾಜರಾಗುವವರನ್ನು ರ್ಯಾಪಿಡ್ ಟೆಸ್ಟ್ ಮಾಡಿಸಲಾಗುತ್ತಿದೆ ಎನ್ನುವ ಮಾಹಿತಿಗಳಿವೆ. ಹಾಗೆ ಟೆಸ್ಟ್ ಗೆ ಒಳಗಾದ ಅಭ್ಯರ್ಥಿಗಳಿಗೆ ಸೋಂಕು ದೃಢಪಟ್ಟರೆ ಕ್ವಾರೆಂಟನ್​ಗೆ ಒಳಗಾಗಬೇಕಾಗುತ್ತದೆ. ಅಂತಹ ಅಭ್ಯರ್ಥಿಗಳಿಗಾಗಿ ಮತ್ತೊಮ್ಮೆ ಪರೀಕ್ಷೆ ನಡೆಸಲಾಗುತ್ತಿದೆಯಾ? ಅಥವಾ ಅಭ್ಯರ್ಥಿಗಳು ಗೈರು ಎಂದು ಅನರ್ಹಗೊಳಿಸಲಾಗುತ್ತದೆಯಾ? ಈ‌ ಕುರಿತು ಯಾವುದೇ ಸ್ಪಷ್ಟತೆ ಇಲ್ಲ. ತಮ್ಮ ಮುಂದಿನ ಭವಿಷ್ಯಕ್ಕಾಗಿ‌ ಕಷ್ಟಪಟ್ಟು ಅಭ್ಯಾಸ ಮಾಡಿರುವ ಅಭ್ಯರ್ಥಿಗಳ ಕುರಿತು ಕಾಳಜಿ ವಹಿಸದೇ ಹೇಗೆ ಪರೀಕ್ಷೆ ನಡೆಸುವ ತೀರ್ಮಾನ‌ ಕೈಗೊಳ್ಳಲಾಗಿದೆ ಎಂದು ಪ್ರಶ್ನಿಸಿರುವ ಪ್ರಿಯಾಂಕ್ ಖರ್ಗೆ ಅವರು ಯಾವ ಪೂರ್ವಾಪರ ಯೋಚನೆ ಮಾಡದೇ ಪರೀಕ್ಷೆ ನಡೆಸಲು ಉದ್ದೇಶಿಸಿರುವುದರ ಹಿಂದೆ ಸರ್ಕಾರದ ಬೇಜವಾಬ್ದಾರಿ ಎದ್ದು ಕಾಣುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಭ್ಯರ್ಥಿಗಳು ಗೊಂದಲ ಹಾಗೂ ಆತಂಕ ಎದುರಿಸುತ್ತಿದ್ದು, ಈಗ ನಡೆಸಲು ಉದ್ದೇಶಿಸಿರುವ ಪರೀಕ್ಷೆಗಳನ್ನು ಮುಂದೂಡಬೇಕೆಂದು ಪ್ರಿಯಾಂಕ್ ಖರ್ಗೆ ಅವರು ಸಿಎಂ ಯಡಿಯೂರಪ್ಪ ಅವರಿಗೆ ಪತ್ರದ ಮೂಲಕ ಆಗ್ರಹಿಸಿದ್ದಾರೆ.

ಪ್ರಿಯಾಂಕ್​ ಖರ್ಗೆ ಪತ್ರ
ಹೆಸರು, ಉದ್ದು ಖರೀದಿಗೆ ಆಗ್ರಹಿಸಿ ಕೃಷಿ‌ ಸಚಿವ ಬಿ.ಸಿ.ಪಾಟೀಲ್ ಅವರಿಗೆ ಪತ್ರ:ಕಲಬುರಗಿ ಜಿಲ್ಲೆಯಲ್ಲಿ ಹೆಸರು ಹಾಗೂ ಉದ್ದು ಬಿತ್ತನೆ ಪ್ರಮಾಣ ಹೆಚ್ಚಾಗಿದ್ದು, ಧಾನ್ಯಗಳನ್ನು ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಖರೀದಿ ಮಾಡಲು ಖರೀದಿ ಕೇಂದ್ರ ಸ್ಥಾಪಿಸುವಂತೆ ಆಗ್ರಹಿಸಿ ಶಾಸಕರಾದ ಪ್ರಿಯಾಂಕ್ ಖರ್ಗೆ ಅವರು ಕೃಷಿ‌ ಸಚಿವರಾದ ಬಿ.ಸಿ.ಪಾಟೀಲ್ ಅವರಿಗೆ ಪತ್ರ ಬರೆದಿದ್ದಾರೆ.ಕಲಬುರಗಿ ಜಿಲ್ಲೆಯಲ್ಲಿ 63,707 ಹೆಕ್ಟೇರ್ ಪ್ರದೇಶದಲ್ಲಿ ಹೆಸರು ಹಾಗೂ 34,954 ಹೆಕ್ಟೇರ್ ಪ್ರದೇಶದಲ್ಲಿ ಉದ್ದು ಬಿತ್ತನೆ ಮಾಡಲಾಗಿತ್ತು. ಈಗಾಗಲೇ ಕಟಾವು ಮಾಡಿದ ರೈತರು ಧಾನ್ಯಗಳನ್ನು ಮಾರುಕಟ್ಟೆಗೆ ಸಾಗಿಸುತ್ತಿದ್ದಾರೆ. ಈ ಸಂದರ್ಭದಲ್ಲಿಯೇ ಧಾರಣೆ ಇಳಿಮುಖವಾಗಿದ್ದು, ಇದರಿಂದಾಗಿ ರೈತರು ನಷ್ಠ ಅನುಭವಿಸುವಂತಾಗಿದೆ. ಆದ್ದರಿಂದ ಈ ಕೂಡಲೇ ಕೇಂದ್ರ ಸರ್ಕಾರದ ಆದೇಶದಂತೆ ಖರೀದಿ ಕೇಂದ್ರಗಳನ್ನು ಸ್ಥಾಪಿಸಿ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಹೆಸರು ಹಾಗೂ ಉದ್ದು ಖರೀದಿಸುವಂತೆ ಶಾಸಕರು ಸಚಿವರನ್ನು ಒತ್ತಾಯಿಸಿದ್ದಾರೆ.

ABOUT THE AUTHOR

...view details