ಕಲಬುರಗಿ: ಜಿಲ್ಲೆಯ ಜೀವನದಿ ಭೀಮೆ ಒಡಲು ಸಂಪೂರ್ಣ ಬತ್ತಿ ಹೊಗಿದ್ದು, ಜನ-ಜಾನುವಾರುಗಳು ನೀರಿಲ್ಲದೆ ಪರಿತಪಿಸುವಂತಾಗಿದೆ. ಜಿಲ್ಲೆ ತೀವ್ರ ಬರದಿಂದ ತತ್ತರಿಸಿದ್ದು, ನಗರ ಹಾಗೂ ಗ್ರಾಮಾಂತರ ಭಾಗದ ಜನರಿಗೆ ನೀರು ಸರಬರಾಜು ಮಾಡುತ್ತಿದ್ದ ಭೀಮಾ ನದಿ ಬತ್ತಿ ಹೋಗಿದೆ.
ನೀರು ಬಿಡಿಸುವಂತೆ ಸಿಎಂಗೆ ಮನವಿ ಮಾಡಿದ ಪ್ರಿಯಾಂಕ್ ಖರ್ಗೆ - kannada news
ಜಿಲ್ಲೆಯ ಜೀವನದಿ ಭೀಮೆ ಒಡಲು ಸಂಪೂರ್ಣ ಬತ್ತಿ ಹೊಗಿದ್ದು, ಜನ-ಜಾನುವಾರುಗಳು ನೀರಿಲ್ಲದೆ ಪರಿತಪಿಸುವಂತಾಗಿದೆ. ಜಿಲ್ಲೆ ತೀವ್ರ ಬರದಿಂದ ತತ್ತರಿಸಿದ್ದು, ನಗರ ಹಾಗೂ ಗ್ರಾಮಾಂತರ ಭಾಗದ ಜನರಿಗೆ ನೀರು ಸರಬರಾಜು ಮಾಡುತ್ತಿದ್ದ ಭೀಮಾ ನದಿ ಬತ್ತಿ ಹೋಗಿದೆ.
ಪ್ರಸ್ತುತ ನೀರಿನ ಸಮಸ್ಯೆಯನ್ನು ತುರ್ತಾಗಿ ಪರಿಹರಿಸಬೇಕಾಗಿದ್ದು, ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಭೀಮಾ ನದಿಗೆ ನೀರು ಹರಿಸುವುದು ಅತ್ಯಗತ್ಯವಾಗಿದೆ. ಇದೇ ಕಾರಣಕ್ಕೆ ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಮಾಡಲು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದು ವಿನಂತಿಸಿಕೊಂಡಿದ್ದಾರೆ.
ಆದ್ರೆ ಮೈತ್ರಿ ಸರ್ಕಾರದ ಸಿಎಂ ಕುಮಾರಸ್ವಾಮಿ ತಮ್ಮ ಸಿಎಂ ಗದ್ದುಗೆ ಉಳಿಸಿಕೊಳ್ಳುವಲ್ಲಿ ಸಮಯ ಕಳೆಯುತ್ತಿದ್ದಾರೆ. ಈ ಭಾಗದ ಜನರ ಕಷ್ಟಕ್ಕೆ ಕಿವಿಗೊಡುತ್ತಿಲ್ಲ ಎಂದು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನಾದರೂ ಸಿಎಂ ಹೈದರಾಬಾದ್ ಕರ್ನಾಟಕದತ್ತ ಗಮನ ಹರಿಸಿ ಮಹಾರಾಷ್ಟ್ರ ಸರ್ಕಾರದೊಂದಿಗೆ ಮಾತನಾಡಿ ಜೀವನದಿಗೆ ನೀರು ಹರಿಸುವಂತಾಗಲಿ ಎಂದು ಬಿಸಿಲೂರು ಮಂದಿ ಆಗ್ರಹಿಸಿದ್ದಾರೆ.