ಕರ್ನಾಟಕ

karnataka

ETV Bharat / state

ಕೂಲಿ ಕಾರ್ಮಿಕರಿಗೆ ಬಸ್ ವ್ಯವಸ್ಥೆ ಕಲ್ಪಿಸಿ... ಸಿಎಂಗೆ ಪ್ರಿಯಾಂಕ್ ಖರ್ಗೆ ಮನವಿ - ಪ್ರಸ್ತುತ ಕೊರೊನಾ ಸೋಂಕು ಹಬ್ಬುವ ಭೀತಿ

ಪ್ರಸ್ತುತ ಕೊರೊನಾ ಸೋಂಕು ಹಬ್ಬುವ ಭೀತಿಯಿಂದ ಇಡೀ ದೇಶವೇ ಲಾಕ್ ಡೌನ್ ಆಗಿದ್ದರಿಂದ ಕೂಲಿ ಕಾರ್ಮಿಕರು ತಾವಿರುವ ಜಾಗಗಳಲ್ಲಿ ಅನ್ನ ನೀರಿಲ್ಲದೆ ಪರಿತಪಿಸುತ್ತಿದ್ದಾರೆ. ಕೂಡಲೇ ಬೆಂಗಳೂರು ಸೇರಿದಂತೆ ಹೊರ ರಾಜ್ಯಗಳಲ್ಲಿ ಬಂಧಿಯಂತಾಗಿರುವ ಕಲ್ಯಾಣ ಕರ್ನಾಟಕದ ಕೂಲಿ ಕಾರ್ಮಿಕರನ್ನು ತಮ್ಮ ಸ್ವಂತ ಊರುಗಳಿಗೆ ಕರೆಸಿಕೊಳ್ಳಲು ಬಸ್ ವ್ಯವಸ್ಥೆ ಕಲ್ಪಿಸುವಂತೆ ಸಿ ಎಂ ಬಿ‌ ಎಸ್ ಯಡಿಯೂರಪ್ಪ ಅವರಿಗೆ ಶಾಸಕ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ.

priyank kharge
ಪ್ರಿಯಾಂಕ್ ಖರ್ಗೆ

By

Published : Mar 29, 2020, 3:20 PM IST

ಕಲಬುರಗಿ:ಲಾಕ್ ಡೌನ್ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಹೊರ ರಾಜ್ಯಗಳಲ್ಲಿ ಬಂಧಿಯಂತಾಗಿರುವ ಕಲ್ಯಾಣ ಕರ್ನಾಟಕದ ಕೂಲಿ ಕಾರ್ಮಿಕರನ್ನು ವಾಪಸ್ ಕರೆಸಿಕೊಳ್ಳಲು ಬಸ್ ವ್ಯವಸ್ಥೆ ಕಲ್ಪಿಸುವಂತೆ ಸಿ ಎಂ ಬಿ‌ ಎಸ್ ಯಡಿಯೂರಪ್ಪ ಅವರಿಗೆ ಶಾಸಕ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಪ್ರಿಯಾಂಕ್​ ಖರ್ಗೆ, ಬರ ಪೀಡಿತ ಕಲ್ಯಾಣ ಕರ್ನಾಟಕದ ಜನರು ಬೆಂಗಳೂರು, ಮಹಾರಾಷ್ಟ್ರ, ಗೋವಾ, ಆಂಧ್ರಪ್ರದೇಶ, ಹೈದರಾಬಾದ್ ಮುಂತಾದ‌ ಕಡೆ ಕೆಲಸಕ್ಕೆ ಅರಸಿ ಗುಳೆ ಹೋಗಿದ್ದು, ಪ್ರಸ್ತುತ ಕೊರೊನಾ ಸೋಂಕು ಹಬ್ಬುವ ಭೀತಿಯಿಂದ ಇಡೀ ದೇಶವೇ ಲಾಕ್ ಡೌನ್ ಆಗಿದ್ದರಿಂದ ಕೂಲಿ ಕಾರ್ಮಿಕರು ತಾವಿರುವ ಜಾಗಗಳಲ್ಲಿ ಅನ್ನ ನೀರಿಲ್ಲದೇ ಪರಿತಪಿಸುತ್ತಿದ್ದಾರೆ. ಕೂಡಲೇ ಅವರನ್ನು ತಮ್ಮ ಸ್ವಂತ ಊರುಗಳಿಗೆ ಕರೆಸಿಕೊಳ್ಳಲು ಸಾರಿಗೆ ವ್ಯವಸ್ಥೆ ಕಲ್ಪಿಸಿ ಹಾಗೂ ಇಲ್ಲಿಗೆ ಬಂದ ನಂತರ ಸೂಕ್ತ ವೈದ್ಯಕೀಯ ತಪಾಸಣೆ ನಡೆಸಿದ ನಂತರ ಸರ್ಕಾರಿ ಶಾಲೆ, ಕಲ್ಯಾಣ‌ಮಂಟಪ‌ ಮುಂತಾದ ಕಡೆ ಅವರಿಗೆ ಹದಿನಾಲ್ಕು ದಿನಗಳ‌ ಕಾಲ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಖರ್ಗೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ.

ಪ್ರಿಯಾಂಕ್ ಖರ್ಗೆಯಿಂದ ಸಿಎಂಗೆ ಮನವಿ
ಹೊರ ರಾಜ್ಯದಿಂದ ಬಂದವರಿಗೆ ತಪಾಸಣೆಗೆ ಒಳಪಡಿಸಿ...ಕೋವಿಡ್-19 ನಿಂದ ಲಾಕ್ ಡೌನ್ ಆದ ಹಿನ್ನೆಲೆ ಕೂಲಿ ಕಾರ್ಮಿಕರು ಸಿಕ್ಕ ಸಿಕ್ಕ ಖಾಸಗಿ ವಾಹನದಲ್ಲಿ ತಮ್ಮ ತಮ್ಮ ಊರುಗಳಿಗೆ ತಂಡೋಪತಂಡವಾಗಿ ಬರುತ್ತಿದ್ದು ಅವರನ್ನು ಸೋಂಕು ತಪಾಸಣೆಗೆ ಒಳಪಡಿಸುತ್ತಿಲ್ಲ. ರಾಜ್ಯ ಈಗಾಗಲೇ ಮೂರನೆಯ ಹಂತ ತಲುಪುವ ಭೀತಿ ಎದುರಿಸುತ್ತಿದ್ದು .‌ಇದರಿಂದಾಗಿಯೂ ಕೂಡಾ ಸೋಂಕು ಹಬ್ಬುವ ಸಾಧ್ಯತೆ‌ ಇದೆ.ಈ‌ ಹಿನ್ನೆಲೆಯಲ್ಲಿ ಕ್ರಮ ಅಗತ್ಯವಾಗಿದೆ‌ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.ಇನ್ನೂ ವಿದೇಶದಲ್ಲಿರುವ ಭಾರತೀಯರನ್ನ ವಿಶೇಷ ವಿಮಾನದ ಮೂಲಕ ತಾಯ್ನಾಡಿಗೆ ಕರೆತಂದರೆ, ನಮ್ಮ ದೇಶದ ಬೇರೆ ಬೇರೆ ಭಾಗಗಳಲ್ಲಿ‌ ವಾಸಿಸುತ್ತಿರುವ ಕೂಲಿ‌ಕಾರ್ಮಿಕರನ್ನು ಸುರಕ್ಷಿತವಾಗಿ ಅವರ ಊರುಗಳಿಗೆ ವಾಪಸ್ ಕರೆತಂದು ವೈದ್ಯಕೀಯ ತಪಾಸಣೆ ನಡೆಸುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

ABOUT THE AUTHOR

...view details