ಕಲಬುರಗಿ: ಕಾಂಗ್ರೆಸ್ ಶಾಸಕರಿರುವ ಕ್ಷೇತ್ರಗಳಿಗೆ ಅನುದಾನ ಕಟ್ ಮಾಡುವ ಮೂಲಕ ಯಡಿಯೂರಪ್ಪ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ, ಶಾಸಕ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಶಾಸಕರಿರುವ ಕ್ಷೇತ್ರಗಳಲ್ಲಿ ಅನುದಾನ ಕಡಿತ: ಪ್ರಿಯಾಂಕ್ ಖರ್ಗೆ ವಾಗ್ದಾಳಿ - ಸರ್ಕಾರದ ವಿರುದ್ದ ಪ್ರಿಯಾಂಕ್ ಖರ್ಗೆ ವಾಗ್ದಾಳಿ
ಕಾಂಗ್ರೆಸ್ ಶಾಸಕರಿರುವ ಕ್ಷೇತ್ರಗಳಿಗೆ ಅನುದಾನ ಕಟ್ ಮಾಡುವ ಮೂಲಕ ಯಡಿಯೂರಪ್ಪ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ, ಶಾಸಕ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಯಡಿಯೂರಪ್ಪ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಪ್ರಿಯಾಂಕ್ ಖರ್ಗೆ ವಾಗ್ದಾಳಿ
ದ್ವೇಷದ ರಾಜಕಾರಣ ಮಾಡಲ್ಲ ಎನ್ನುವ ಯಡಿಯೂರಪ್ಪ ಕಲಬುರಗಿ ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕರಿರುವ ಕ್ಷೇತ್ರಗಳಿಗೆ ನೀಡಿದ ಅನುದಾನ ಕಡಿತ ಮಾಡಿದ್ದಾರೆಂದು ದೂರಿದರು. ಬಿಜೆಪಿ ಶಾಸಕರಿರುವ ಕ್ಷೇತ್ರಕ್ಕೆ ಮಾತ್ರ ಅನುದಾನ ಬಿಡುಗಡೆ ಮಾಡಲಾಗಿದೆ. 400 ಕೋಟಿ ರೂಗೂ ಅಧಿಕ ಅನುದಾನ ಕಡಿತಗೊಳಿಸಲಾಗಿದೆ ಎಂದು ದೂರಿದ್ರು.
ಇದೇ ವೇಳೆ ಪಕ್ಷ ತೊರೆದ ಶಾಸಕರಿಗೆ ನಾಚಿಕೆ ಇಲ್ಲ ಎಂದು ಅನರ್ಹ ಶಾಸಕರ ವಿರುದ್ಧ ಖರ್ಗೆ ಕಿಡಿಕಾರಿದರು. ಇನ್ನೂ ಕೆಲವರು ಐಟಿ ಇಡಿ ದಾಳಿಗೆ ಹೆದರಿ ಬಿಜೆಪಿಗೆ ಹೋಗುತ್ತಿದ್ದಾರೆ ಎಂದು ಹರಿಹಾಯ್ದರು.