ಕಲಬುರಗಿ :ಕಾಂಗ್ರೆಸ್ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬೆದರಿಕೆ ಕರೆ ಬಂದ ಕುರಿತು ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿ ಪ್ರತಿಕ್ರಿಯಿಸಿದ್ದಾರೆ.
"ನಾವು ಸತ್ಯ ಹೇಳುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ನಾವು ಬುದ್ಧ, ಬಸವ ಹಾಗೂ ಅಂಬೇಡ್ಕರ್ ಅವರ ತತ್ವ ಸಿದ್ಧಾಂತವನ್ನು ಬಲವಾಗಿ ನಂಬಿದ್ದೇವೆ. ಯಾವಾಗಲೂ ಸಂವಿಧಾನದ ಪರವಾಗಿದ್ದೇವೆ.
ಯಾರಿಂದಲೂ ನಮ್ಮನ್ನು ಹೆದರಿಸಲು ಸಾಧ್ಯವಿಲ್ಲ. ಬೆದರಿಕೆ ಕರೆಗಳು ನಮ್ಮ ವಿಚಾರಗಳ ಮೌಲ್ಯವನ್ನು ಇನ್ನಷ್ಟು ಗಟ್ಟಿಗೊಳಿಸುತ್ತವೆ" ಎಂದು ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದಾರೆ.
ಓದಿ : ಸಂವಿಧಾನಕ್ಕೆ ತಿದ್ದುಪಡಿ ತಂದು ನೂರಕ್ಕೆ 100ರಷ್ಟು ಮೀಸಲಾತಿ ತರಲಿ: ಶಾಸಕ ಮಹೇಶ್
ನನ್ನ ತಂದೆ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ ದಿನದಿಂದಲೂ ಈವರೆಗೆ ಅವರಿಗೆ 3 ಬಾರಿ ಮತ್ತು ನನಗೆ 2 ಬಾರಿ ಬೆದರಿಕೆ ಕರೆಗಳು ಬಂದಿವೆ. ಇಂತಹ ಬೆದರಿಕೆ ಕರೆಗಳಿಂದ ನಾವು ಮತ್ತಷ್ಟು ಗಟ್ಟಿಗೊಳ್ಳುತ್ತೇವೆ ಎಂದು ಹೇಳಿದ್ದಾರೆ.