ಕಲಬುರಗಿ:ಸ್ವಾತಂತ್ರ್ಯ ಹೋರಾಟಗಾರ ಹೆಚ್. ಎಸ್. ದೊರೆಸ್ವಾಮಿ ಅವರ ಬಗ್ಗೆ ಅವಹೇಳನಕಾರಿ ಮಾತನಾಡಿದ ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ರಾಜೀನಾಮೆ ನೀಡುವಂತೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕಲಬುರಗಿ: ಯತ್ನಾಳ್ ರಾಜೀನಾಮೆ ನೀಡುವಂತೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ - ಕಲಬುರಗಿಯಲ್ಲಿ ಪ್ರತಿಭಟನೆ ಸುದ್ದಿ
ಸ್ವಾತಂತ್ರ್ಯ ಹೋರಾಟಗಾರ ಹೆಚ್. ಎಸ್. ದೊರೆಸ್ವಾಮಿ ಅವರ ಬಗ್ಗೆ ಅವಹೇಳನಕಾರಿ ಮಾತನಾಡಿದ ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ರಾಜೀನಾಮೆ ನೀಡುವಂತೆ ಆಗ್ರಹಿಸಿ ಕಲಬುರಗಿಯಲ್ಲಿ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಜಗತ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನೆ ನಡೆಸಿದ ಹೋರಾಟಗಾರರು, ಶಾಸಕ ಯತ್ನಾಳ್ ಹಾಗೂ ಬಿಜೆಪಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ದೊರೆಸ್ವಾಮಿ ಅವರು ನಮ್ಮ ಹೆಮ್ಮೆ ಎಂಬ ಭಾವಚಿತ್ರ ಹಿಡಿದು ಮೆರವಣಿಗೆ ನಡೆಸಿದರು. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದೆ ಇರುವ ಆರ್ಎಸ್ಎಸ್, ಬಿಜೆಪಿ ನಾಯಕರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ದೊರೆಸ್ವಾಮಿ ಬಗ್ಗೆ ಅವಹೇಳನಕಾರಿ ಮಾತನಾಡುತ್ತಿದ್ದಾರೆ. ಇಷ್ಟೆಲ್ಲಾ ನಡೆದರೂ ಬಿಜೆಪಿ ನಾಯಕರು ಮಾತ್ರಾ ಯತ್ನಾಳ್ ವಿರುದ್ದ ಯಾವುದೇ ಕ್ರಮ ಕೈಗೊಳ್ಳದೆ ಹೇಳಿಕೆಯನ್ನು ಸಮರ್ಥಿಸಿಕೋಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ಇನ್ನು ಬಿಜೆಪಿಗೆ ಸ್ವಾತಂತ್ರ್ಯ ಹೋರಾಟಗಾರರ ಮೇಲೆ ಕಿಂಚಿತ್ತಾದರೂ ಗೌರವ ಇದ್ದರೆ ಕೂಡಲೇ ಶಾಸಕ ಯತ್ನಾಳ ಅವರಿಂದ ರಾಜೀನಾಮೆ ಪಡೆಯಬೇಕೆಂದು ಆಗ್ರಹಿಸಿದರು.