ಕಲಬುರಗಿ: ಜಿಲ್ಲೆಯಾದ್ಯಂತ 144 ನಿಷೇಧಾಜ್ಞೆ ವಿಸ್ತರಿಸಿ ಜಿಲ್ಲಾಧಿಕಾರಿ ಬಿ. ಶರತ್ ಆದೇಶ ಹೊರಡಿಸಿದ್ದಾರೆ.
ಕಲಬುರಗಿ: ಜೂನ್ 15 ರವರೆಗೆ ನಿಷೇಧಾಜ್ಞೆ ವಿಸ್ತರಿಸಿ ಜಿಲ್ಲಾಧಿಕಾರಿ ಆದೇಶ - District Collector B. Sharath
ಕಲಬುರಗಿಯಲ್ಲಿ ಸಿಆರ್ಪಿಸಿ 1974 ಕಲಂ 144ರ ಅನ್ವಯ ಜೂನ್ 15 ರವರೆಗೆ ನಿಷೇಧಾಜ್ಞೆ ವಿಸ್ತರಿಸಿ ಜಿಲ್ಲಾಧಿಕಾರಿ ಬಿ.ಶರತ್ ಆದೇಶ ಹೊರಡಿಸಿದ್ದಾರೆ.

ಜಿಲ್ಲಾಧಿಕಾರಿ ಬಿ.ಶರತ್
ಕೊರೊನಾ ವೈರಸ್ ನಿಯಂತ್ರಣ, ಜನರು ಗುಂಪು ಸೇರದಂತೆ ತಡೆಗಟ್ಟುವ ನಿಟ್ಟಿನಲ್ಲಿ ನಿಷೇಧಾಜ್ಞೆ ವಿಸ್ತರಿಸಲಾಗಿದೆ. ಸಿಆರ್ಪಿಸಿ 1974 ಕಲಂ 144ರ ಅನ್ವಯ ಜೂನ್ 15 ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಶನಿವಾರ ಒಂದೇ ದಿನ ಜಿಲ್ಲೆಯಲ್ಲಿ 61 ಪ್ರಕರಣಗಳು ಕಾಣಿಸಿಕೊಂಡಿದ್ದು, ಕೊರೊನಾ ಕಟ್ಟಿ ಹಾಕಲು ಜಿಲ್ಲಾಧಿಕಾರಿಯವರು ಈ ನಿಷೇಧಾಜ್ಞೆ ಆದೇಶ ಹೊರಡಿಸಿದ್ದಾರೆ.