ಕಲಬುರಗಿ:ಪೊಲೀಸ್ ಠಾಣೆ ಎದುರೇ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ತಾಪುರ ಪಟ್ಟಣದಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ.
ಗೋವು ಸಾಗಾಟಕ್ಕೆ ಸಂಬಂಧಿಸಿ ಎರಡು ಕೋಮುಗಳ ನಡುವೆ ಗಲಭೆ ಸೃಷ್ಟಿಯಾಗಿತ್ತು. ಒಂದು ಕೋಮಿನ ಜನರು ಭಾನುವಾರ ರಾತ್ರಿ ಪೊಲೀಸ್ ಠಾಣೆ ಮುಂದೆ ಕಲ್ಲು ತೂರಾಟ ನಡೆಸಿದ್ದರು. ಪ್ರತಿಯಾಗಿ ಮತ್ತೊಂದು ಕೋಮಿನಿಂದ ನಿನ್ನೆ ರಾತ್ರಿ ಚಿತ್ತಾಪುರದಲ್ಲಿ ಪ್ರತಿಭಟನೆ ನಡೆಸಿದ್ದರು.
ಚಿತ್ತಾಪುರದಲ್ಲಿ ಕೋಮುಗಳ ನಡುವೆ ಕಲ್ಲು ತೂರಾಟ ಇದೀಗ ಮುನ್ನೆಚ್ಚರಿಕಾ ಕ್ರಮವಾಗಿ ಚಿತ್ತಾಪುರ ಪಟ್ಟಣ ಹಾಗೂ 5 ಕಿಲೋಮೀಟರ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಿ ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಸದ್ಯ ಚಿತ್ತಾಪುರ ಪಟ್ಟಣದಲ್ಲಿ ಬೂದಿ ಮುಚ್ಚಿದ ಕೆಂಡದ ವಾತಾವರಣ ಸೃಷ್ಟಿಯಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಚಿತ್ತಾಪುರ ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.