ಕರ್ನಾಟಕ

karnataka

ETV Bharat / state

ಜೆಎನ್​​​​ಯು ಹಲ್ಲೆ ಘಟನೆ ಖಂಡಿಸಿ ಕಲಬುರಗಿಯಲ್ಲಿ ಪ್ರತಿಭಟನೆ - J.N.U. The onslaught on VV

ಜೆ.ಎನ್.ಯು. ವಿ.ವಿ.ಯಲ್ಲಿ ಉದ್ದೇಶಪೂರ್ವಕವಾಗಿ ಮುಸುಕು ಧರಿಸಿ ದಾಂಧಲೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಕಲಬುರಗಿಯಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಜೆ.ಎನ್.ಯು ವಿ.ವಿಯಲ್ಲಿನ ಹಲ್ಲೆ ಘಟನೆ ಖಂಡಿಸಿ ಕಲಬುರಗಿಯಲ್ಲಿ ಪ್ರತಿಭಟನೆ
ಜೆ.ಎನ್.ಯು ವಿ.ವಿಯಲ್ಲಿನ ಹಲ್ಲೆ ಘಟನೆ ಖಂಡಿಸಿ ಕಲಬುರಗಿಯಲ್ಲಿ ಪ್ರತಿಭಟನೆ

By

Published : Jan 6, 2020, 2:32 PM IST

ಕಲಬುರಗಿ: ದೆಹಲಿಯ ಜವಾಹರಲಾಲ್ ನೆಹರೂ ವಿ.ವಿ.ಯಲ್ಲಿ ವಿದ್ಯಾರ್ಥಿಗಳ ಹಾಗೂ ಶಿಕ್ಷಕರ ಮೇಲಿನ ಹಲ್ಲೆ ಘಟನೆ ಖಂಡಿಸಿ ಕಲಬುರಗಿಯಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಜೆ.ಎನ್.ಯು ವಿ.ವಿಯಲ್ಲಿನ ಹಲ್ಲೆ ಘಟನೆ ಖಂಡಿಸಿ ಕಲಬುರಗಿಯಲ್ಲಿ ಪ್ರತಿಭಟನೆ

ಜಿಲ್ಲಾಧಿಕಾರಿ ಕಚೇರಿ ಎದುರು ಎಐಡಿಎಸ್​ಒ, ಎಸ್ ಎಫ್ ಐ, ಕೆ ವಿ ಎಸ್ ಹಾಗೂ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಜೆ.ಎನ್.ಯು. ಗಲಭೆಯ ಹಿಂದೆ ಎಬಿವಿಪಿ, ಆರ್.ಎಸ್.ಎಸ್.ನ ಕೈವಾಡವಿದೆ ಎಂದು ಆರೋಪಿಸಿದರು. ಸಂಘ ಪರಿವಾರಕ್ಕೆ ಕೇಂದ್ರ ಸರ್ಕಾರದ ಕುಮ್ಮಕ್ಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಜೆ.ಎನ್.ಯು. ವಿ.ವಿ.ಯಲ್ಲಿ ಉದ್ದೇಶಪೂರ್ವಕವಾಗಿ ಮುಸುಕು ಧರಿಸಿ ದಾಂಧಲೆ ಮಾಡಲಾಗುತ್ತಿದೆ. ಎಬಿವಿಪಿ ಗೂಂಡಾಗಳ ಮೂಲಕ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿಸಲಾಗುತ್ತಿದೆ. ಇದು ಕೇಂದ್ರ ಸರ್ಕಾರದ ವ್ಯವಸ್ಥಿತ ಷಡ್ಯಂತ್ರ. ಕೂಡಲೇ ಹಲ್ಲೆಕೋರರ ಮೇಲೆ ಕ್ರಮ ಕೈಗೊಳ್ಳಬೇಕು, ಜೆ.ಎನ್.ಯು. ವಿದ್ಯಾರ್ಥಿಗಳ ಹಿತರಕ್ಷಣೆ ಕಾಪಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ABOUT THE AUTHOR

...view details