ಕಲಬುರಗಿ: ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಹೈ.ಕ. ಚೇಂಬರ್ ಆಫ್ ಕಾಮರ್ಸ್ ಹಾಗೂ ವಿವಿಧ ರೈತ ಸಂಘಟನೆಗಳ ನೇತೃತ್ವದಲ್ಲಿ ಇಂದು ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಕಲಬುರಗಿಯಲ್ಲಿ ಪ್ರತಿಭಟನೆ - ಎಪಿಎಂಸಿ ಕಾಯ್ದೆ
ರಾಜ್ಯ ಸರ್ಕಾರದ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ವಿವಿಧ ರೈತ ಸಂಘಟನೆಗಳ ಕಾರ್ಯಕರ್ತರು ಇಂದು ಕೃಷಿ ಉತ್ಪನ್ನ ಮಾರುಕಟ್ಟೆ ಎದುರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆ
ಕೃಷಿ ಉತ್ಪನ್ನ ಮಾರುಕಟ್ಟೆ ಎದುರು ಚೇಂಬರ್ ಆಫ್ ಕಾಮರ್ಸ್ ಪ್ರತಿನಿಧಿಗಳು, ಕರ್ನಾಟಕ ಪ್ರಾಂತ ರೈತ ಸಂಘ, ಅಖಿಲ ಭಾರತ ಕಿಸಾನ್ ಸಭಾ ಮತ್ತಿತರ ರೈತ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಎಪಿಎಂಸಿ ತಿದ್ದುಪಡಿ ಕಾಯ್ದೆಯ ಪ್ರತಿಯನ್ನು ಸುಟ್ಟು ಹಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಈ ಕೂಡಲೇ ರಾಜ್ಯ ಸರ್ಕಾರ ತೆಗೆದುಕೊಂಡಿರುವ ತಿದ್ದುಪಡಿ ಮಸೂದೆ ಬಗೆಗಿನ ಕ್ರಮ ಹಿಂಪಡೆಯಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.