ಕಲಬುರಗಿ: ಬೆಂಗಳೂರಿನ ಕಾವಲ್ ಭೈರಸಂದ್ರ ಗಲಭೆಯಲ್ಲಿ ಖಾಸಗಿ ಸುದ್ದಿ ವಾಹಿನಿ ಪತ್ರಕರ್ತರ ಮೇಲೆ ನಡೆದ ಹಲ್ಲೆ ಖಂಡಿಸಿ ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಪತ್ರಕರ್ತರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ - Protest in kalaburgi
ರಾಜ್ಯದಲ್ಲಿ ಈ ರೀತಿಯ ಘಟನೆಗಳು ಪದೇ ಪದೇ ಮರುಕಳಿಸುತ್ತಿದ್ದು, ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿರುವ ಪತ್ರಕರ್ತರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಅಸಮಾಧಾನ ಹೊರ ಹಾಕಿದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಹಲ್ಲೆ ನಡೆಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿದರು. ಕಳೆದ ರಾತ್ರಿ ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಹಾಗೂ ಕಾವಲ್ ಭೈರಸಂದ್ರ ವ್ಯಾಪ್ತಿಯಲ್ಲಿ ನಡೆದ ಗಲಭೆಯ ವರದಿ ಮಾಡಲು ತೆರಳಿದ್ದ ಪತ್ರಕರ್ತರ ಮೇಲೆ ಹಲ್ಲೆ ಮಾಡಿದ್ದಲ್ಲದೆ ಅವರ ವಾಹನಗಳನ್ನು ಬೆಂಕಿ ಹಚ್ಚಿ ಧ್ವಂಸ ಮಾಡಲಾಗಿದೆ. ರಾಜ್ಯದಲ್ಲಿ ಈ ರೀತಿಯ ಘಟನೆಗಳು ಪದೇ ಪದೇ ಮರುಕಳಿಸುತ್ತಿದ್ದು, ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿರುವ ಪತ್ರಕರ್ತರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಅಸಮಾಧಾನ ಹೊರ ಹಾಕಿದರು.
ಆದ್ದರಿಂದ ರಾಜ್ಯ ಸರ್ಕಾರ ಕೂಡಲೇ ಎಚ್ಚೆತ್ತು ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರ ರಕ್ಷಣೆಗಾಗಿ ವಿಶೇಷ ಕಾನೂನು ಜಾರಿಗೊಳಿಸಬೇಕು. ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು ಬಂಧಿಸಿ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ.