ಕಲಬುರಗಿ:ಕಾಂಗ್ರೆಸ್ ಜೆಡಿಎಸ್ ಶಾಸಕರ ರಾಜೀನಾಮೆಗೆ ಬಿಜೆಪಿ ನಾಯಕರ ಆಪರೇಷನ್ ಕಮಲ ಕಾರಣ ಎಂದು ಆರೋಪಿಸಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ ಸಿಎಂ ಹೆಚ್ಡಿಕೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಕಲಬುರಗಿಯಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ - kannadanews
ಆಪರೇಷನ್ ಕಮಲ ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಿಎಂ ಹೆಚ್ಡಿಕೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಕಲಬುರಗಿಯ ವಿವಿಧೆಡೆ ಪ್ರತಿಭಟನೆ ನಡೆಸಿದ್ದಾರೆ.
ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ
ನಗರದ ಅನ್ನಪೂರ್ಣ ಕ್ರಾಸ್ನಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಡಿದ ಕಾರ್ಯಕರ್ತರು, ಬಿಜೆಪಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರಧಾನಿ ಮೋದಿ, ಅಮಿತ್ ಶಾ ಅವರ ಕುಮ್ಮಕ್ಕಿನಿಂದ ಯಡಿಯೂರಪ್ಪ ಆಪರೇಷನ್ ಕಮಲದ ಮೂಲಕ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುತ್ತಿದ್ದಾರೆಂದು ಆರೋಪಿಸಿದ್ರು. ಅಲ್ಲದೇ ಆಪರೇಷನ್ ಕಮಲ, ಶಾಸಕರ ರೆಸಾರ್ಟ್ ರಾಜಕಾರಣ ಖಂಡಿಸಿ ಜನವಾದಿ ಮಹಿಳಾ ಸಂಘಟನೆ ನೇತೃತ್ವದಲ್ಲಿ ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಲಾಯಿತು.