ಕಲಬುರಗಿ: ಚಿಂಚೋಳಿ ಉಪ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾಧವ್ ಪರ ಪ್ರಚಾರಕ್ಕೆ ತೆರಳಿದ್ದ ಬಿಜೆಪಿ ನಾಯಕರಿಗೆ ತಾಂಡದ ಜನ ಮುತ್ತಿಗೆ ಹಾಕಿರುವ ಘಟನೆ ನಡೆದಿದೆ.
ಪ್ರಚಾರಕ್ಕೆ ಹೋದವರಿಗೆ ಗ್ರಾಮಸ್ಥರಿಂದ ಘೇರಾವ್... ಜಾಧವ್ ಕೈ ಬಿಟ್ಟಿದ್ದಕ್ಕೆ ಸ್ಪಷ್ಟನೆ ಕೇಳಿದ ಜನ - Kalaburagi
ಮಾಜಿ ಸಚಿವ ವಿ ಸೋಮಣ್ಣ ಮತ್ತು ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್ಗೆ ಚಿಂಚೋಳಿ ತಾಲೂಕಿನ ಮೋಘಾ ತಾಂಡದಲ್ಲಿ ಗ್ರಾಮಸ್ಥರು ಘೇರಾವ್ ಹಾಕಿದ್ದರು. ಉಮೇಶ್ ಜಾಧವ್‌ಗೆ ಮತ ಹಾಕಿದ್ವಿ, ಕಾರಣವಿಲ್ಲದೇ ಅವರು ಕಾಂಗ್ರೆಸ್ ಪಕ್ಷ ಬಿಟ್ಟು ಹೋಗಿದ್ದಾರೆ. ಯಾವ ಕಾರಣಕ್ಕೆ ಅವರು ಕಾಂಗ್ರೆಸ್ ತೊರೆದಿದ್ದಾರೆ ಅನ್ನೋದನ್ನು ಸ್ಪಷ್ಟಪಡಿಸಬೇಕೆಂದು ಆಗ್ರಹಿಸಿದ್ದಾರೆ.
![ಪ್ರಚಾರಕ್ಕೆ ಹೋದವರಿಗೆ ಗ್ರಾಮಸ್ಥರಿಂದ ಘೇರಾವ್... ಜಾಧವ್ ಕೈ ಬಿಟ್ಟಿದ್ದಕ್ಕೆ ಸ್ಪಷ್ಟನೆ ಕೇಳಿದ ಜನ](https://etvbharatimages.akamaized.net/etvbharat/prod-images/768-512-3225333-thumbnail-3x2-rotest.jpg)
ಮಾಜಿ ಸಚಿವ ವಿ ಸೋಮಣ್ಣ ಮತ್ತು ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್ಗೆ ತಾಲೂಕಿನ ಮೋಘಾ ತಾಂಡದಲ್ಲಿ ಗ್ರಾಮಸ್ಥರು ಘೇರಾವ್ ಹಾಕಿ ಪ್ರತಿಭಟನೆ ನಡೆಸಿದರು. ಈ ಹಿಂದೆ ಡಾ. ಉಮೇಶ್ ಜಾಧವ್‌ಗೆ ಮತ ಹಾಕಿದ್ವಿ. ಆದ್ರೆ ಅವ್ರು ಕಾರಣವಿಲ್ಲದೇ ಕಾಂಗ್ರೆಸ್ ಪಕ್ಷ ಬಿಟ್ಟು ಹೋಗಿದ್ದಾರೆ. ಯಾವ ಕಾರಣಕ್ಕೆ ಕಾಂಗ್ರೆಸ್ ಬಿಟ್ಟು ಹೋಗಿದ್ದಾರೆ ಅನ್ನೋದರ ಬಗ್ಗೆ ಸ್ಪಷ್ಟಪಡಿಸುವಂತೆ ಆಗ್ರಹಿಸಿದರು.
ಮತ ಹಾಕಿದ ಜನರಿಗೆ ಮೋಸ ಮಾಡಿದ ಜಾಧವ್‌ಗೆ ನಮ್ಮ ಗ್ರಾಮಕ್ಕೆ ಬಂದು ಮತ ಕೇಳುವ ಹಕ್ಕಿಲ್ಲವೆಂದು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು, ಪ್ರಚಾರಕ್ಕೂ ಅಡ್ಡಿಪಡಿಸಿದ್ದಾರೆ. ಈ ಹಿನ್ನಲೆ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬಿಜೆಪಿ ನಾಯಕರು ಬಂದ ದಾರಿಗೆ ಸುಂಕ ಇಲ್ಲ ಎಂಬಂತೆ ಅಲ್ಲಿಂದ ಕಾಲ್ಕಿತ್ತಿದ್ದಾರೆ.
TAGGED:
Kalaburagi