ಸೇಡಂ:ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರ ಹೇರುತ್ತಿರುವ ಕ್ರಮಗಳನ್ನು ಖಂಡಿಸಿ ಅನುದಾನ ರಹಿತ ಶಾಲಾ ಕಾಲೇಜುಗಳ ಒಕ್ಕೂಟದಿಂದ ಪ್ರತಿಭಟನಾ ರ‍್ಯಾಲಿ ನಡೆಸಲಾಯಿತು.
ಖಾಸಗಿ ಶಿಕ್ಷಣ ಸಂಸ್ಥೆಗಳ ಸ್ಥಿತಿ ಅತಂತ್ರ: ಅನುದಾನ ರಹಿತ ಶಾಲಾ ಕಾಲೇಜುಗಳ ಒಕ್ಕೂಟದಿಂದ ಪ್ರತಿಭಟನೆ - Tahsildar Subbanna Jamakhandi
ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರ ಹೇರುತ್ತಿರುವ ಕ್ರಮಗಳನ್ನು ಖಂಡಿಸಿರುವ ಅನುದಾನ ರಹಿತ ಶಾಲಾ ಕಾಲೇಜುಗಳ ಒಕ್ಕೂಟ ಸೇಡಂನಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿತು.
ಅನುದಾನ ರಹಿತ ಶಾಲಾ ಕಾಲೇಜುಗಳ ಒಕ್ಕೂಟದಿಂದ ಮನವಿ
ಶ್ರೀ ಕೊತ್ತಲ ಬಸವೇಶ್ವರ ದೇವಾಲಯದಿಂದ ಹೊರಟ ಪ್ರತಿಭಟನಾ ಮೆರವಣಿಗೆ ಮುಖ್ಯ ರಸ್ತೆ ಮಾರ್ಗವಾಗಿ ಎಸಿ ಕಚೇರಿಗೆ ತಲುಪಿತು. ನಂತರ ಮಾನವ ಸರಪಳಿ ನಿರ್ಮಿಸಿ ಸರ್ಕಾರದ ಕ್ರಮ ವಿರೋಧಿಸಿ ಸಹಾಯಕ ಆಯುಕ್ತರ ಕಚೇರಿ ವಿಶೇಷ ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಸಂಘದ ಜಿಲ್ಲಾಧ್ಯಕ್ಷ ಸುನೀಲ್, ತಾಲೂಕು ಅಧ್ಯಕ್ಷ ವಿಜಯಕುಮಾರ್ ಸೂರವಾರ, ಶಂಕರ ಬಿರಾದಾರ, ರವಿ ಸಾಹು, ಸಿದ್ದಯ್ಯಸ್ವಾಮಿ ಆಡಕಿ, ಮಲ್ಲಿಕಾರ್ಜುನ ಮಠಪತಿ ಬಿಬ್ಬಳ್ಳಿ, ಪ್ರದೀಪ್ ಪಾಟೀಲ್ ಹೊಸಳ್ಳಿ ಇನ್ನಿತರರು ಇದ್ದರು.