ಕಲಬುರಗಿ:ಐಟಿಐ ತರಬೇತುದಾರರಿಗೆ ಜಾರಿಗೊಳಿಸಿರುವ ಆನ್‌ಲೈನ್ ಪರೀಕ್ಷಾ ಪದ್ಧತಿ ಕೈಬಿಡುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಲಾಯಿತು.
ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕಕ್ಕೂ ಜಿಎಸ್‌ಟಿ.. ಕಲಬುರಗಿಯಲ್ಲಿ ಎಐಡಿಎಸ್ಒ ಪ್ರತಿಭಟನೆ.. - ಕಲಬುರಗಿ ಸುದ್ದಿ ಎಐಡಿಎಸ್ಒ ಪ್ರತಿಭಟನೆ
ಐಟಿಐ ತರಬೇತುದಾರರಿಗೆ ಜಾರಿಗೊಳಿಸಿರುವ ಆನ್‌ಲೈನ್ ಪರೀಕ್ಷಾ ಪದ್ಧತಿ ಕೈಬಿಡುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆ
ಎಐಡಿಎಸ್ಒ ಸಂಘಟನೆ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಐಟಿಐ ತರಬೇತುದಾರರು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಕೂಡಲೇ ಆನ್‌ಲೈನ್ ಪರೀಕ್ಷಾ ಪದ್ಧತಿ ಕೈಬಿಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.ಪರೀಕ್ಷಾ ಶುಲ್ಕ ಏರಿಕೆಯನ್ನು ಹಿಂಪಡೆಯುವುದರ ಜತೆಗೆ ಆನ್‌ಲೈನ್ ಪರೀಕ್ಷಾ ಶುಲ್ಕ ಪಾವತಿಗೆ ಅನ್ವಯಿಸುತ್ತಿರುವ ಜಿಎಸ್ಟಿಯನ್ನೂ ರದ್ದುಪಡಿಸುವಂತೆ ಆಗ್ರಹಿಸಿದರು.