ಕರ್ನಾಟಕ

karnataka

ETV Bharat / state

ನಿರ್ಬಂಧಿತ ಕೀಟನಾಶಕ ಮಾರಾಟ ಖಂಡಿಸಿ ರಾಜ್ಯ ಪ್ರಾಂತ ರೈತ ಸಂಘದಿಂದ ಪ್ರತಿಭಟನೆ.. - ಕಲಬುರಗಿಯಲ್ಲಿ ನಿರ್ಬಂಧಿತ ಕೀಟನಾಶಕ ಮಾರಾಟ

ಕಲಬುರಗಿಯಲ್ಲಿ ನಿರ್ಬಂಧಿತ ಕೀಟನಾಶಕ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ಪ್ರಾಂತ ರೈತ ಸಂಘಟನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕರ್ನಾಟಕ ಪ್ರಾಂತ ರೈತ ಸಂಘದಿಂದ ಪ್ರತಿಭಟನೆ

By

Published : Nov 22, 2019, 4:53 PM IST

ಕಲಬುರಗಿ:ನಿರ್ಬಂಧಿತ ಕೀಟನಾಶಕ ಔಷಧಿಗಳನ್ನು ಕಲಬುರ್ಗಿಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕರ್ನಾಟಕ ಪ್ರಾಂತ ರೈತ ಸಂಘದಿಂದ ಪ್ರತಿಭಟನೆ..

ಮನುಷ್ಯನು ಸೇವಿಸುವ ದ್ವಿದಳ ಧಾನ್ಯಗಳು, ತರಕಾರಿಗಳಿಗಳಿಗೆ ನಿರ್ಬಂಧಿತ ಕೀಟನಾಶಕ ಸಿಂಪಡಣೆ ಮಾಡಲಾಗುತ್ತಿದೆ. ಇದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಗಳಿದ್ದು, ಸಿಂಪಡಣೆ ವೇಳೆ ಅನೇಕ ರೈತರು ಸಾವನ್ನಪ್ಪಿರುವ ಘಟನೆಗಳು ವರದಿಯಾಗಿದೆ. ಆದ್ದರಿಂದ ಅಕ್ರಮವಾಗಿ ಮಾರಾಟ ಮಾಡುತ್ತಿರುವ ಕೀಟನಾಶಕ ಜಾಲವನ್ನು ಪತ್ತೆ ಹಚ್ಚಿಬೇಕು. ಅಂತವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಕೃಷಿ ಇಲಾಖೆಯ ನಿರ್ಲಕ್ಷ್ಯದಿಂದ ಇಂಥ ಅವಘಡಗಳು ಹೆಚ್ಚಾಗುತ್ತಿವೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.

ABOUT THE AUTHOR

...view details