ಕಲಬುರಗಿ: ನಿವೇಶನ ರಹಿತರಿಗೆ ವಸತಿ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸ್ಲಂ ಜನಾಂದೋಲನ ಸಮಿತಿ ಜಿಲ್ಲೆಯಲ್ಲಿ ವಿಭಿನ್ನಾಗಿ ಪ್ರತಿಭಟನೆ ನಡೆಸಿತು.
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸ್ಲಂ ಜನಾಂದೋಲನ ಸಮಿತಿಯಿಂದ ಪ್ರತಿಭಟನೆ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಲಬುರಗಿಯ ಸ್ಲಂ ಜನಾಂದೋಲನ ಸಮಿತಿ ನಗರದ ಜಗತ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಜನಪದ ಕಲಾ ತಂಡಗಳ ನೇತೃತ್ವದಲ್ಲಿ ಮೆರವಣಿಗೆ ನಡೆಸಿ ವಿಭಿನ್ನಾಗಿ ಪ್ರತಿಭಟನೆ ನಡೆಸಿತು.
ನಗರದ ಜಗತ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಜನಪದ ಕಲಾ ತಂಡಗಳ ನೇತೃತ್ವದಲ್ಲಿ ಮೆರವಣಿಗೆ ನಡೆಸಿ ವಿಭಿನ್ನಾಗಿ ಪ್ರತಿಭಟನೆ ಮಾಡಲಾಯಿತು. ಈ ವೇಳೆ ಪ್ರತಿಭಟನಾಕಾರರು ಕಲಬುರಗಿ ನಗರದಲ್ಲಿ ನಿವೇಶನ ರಹಿತರಿಗೆ 100 ಎಕರೆ ಜಮೀನು ಕಾಯ್ದಿರಿಸಬೇಕು. ವಸತಿ ರಹಿತರಿಗೆ ವಸತಿ ಕಲ್ಪಿಸಿಕೊಡಬೇಕು. ನಗರದಲ್ಲಿರುವ ಲಂಗರ್ ಹನುಮಾನ ನಗರ, ಸಿದ್ಧರೂಢ ಕಾಲೋನಿ, ತಾರಫೈಲ್, ಹಮಾಲವಾಡಿ, ಶಿವಶಕ್ತಿ ನಗರ, ಅರಳಿಗಿಡ ಬಸವಣ್ಣ ನಗರಗಳನ್ನು ಸ್ಲಂ ಬಡಾವಣೆಗಳೆಂದು ಘೋಷಣೆ ಮಾಡಬೇಕೆಂದು ಆಗ್ರಹಿಸಿದರು. ಇದೇ ವೇಳೆ ಪ್ರತಿಯೊಂದು ಕೊಳೆಗೇರಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಬೇಕೆಂದು ಒತ್ತಾಯಿಸಿದರು.
ಮೆರವಣಿಗೆ ನಂತರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ, ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಸ್ಲಂ ನಿವಾಸಿಗಳ ಸಮಾವೇಶ ನಡೆಸಿದರು.