ಕಲಬುರಗಿ: ಎನ್ಆರ್ಸಿ, ಸಿಎಎ ಮತ್ತು ಎನ್ಪಿಆರ್ ಹಿಂಪಡೆಯುವಂತೆ ಹಾಗೂ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಲಬುರಗಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಯಿತು.
ಸಿಎಎ ಹಿಂಪಡೆಯಲು ಆಗ್ರಹಿಸಿ ಕಲಬುರಗಿಯಲ್ಲಿ ಪ್ರತಿಭಟನೆ.. - ಕಲಬುರಗಿ ಪ್ರತಿಭಟನೆ ಸುದ್ದಿ
ಎನ್ಆರ್ಸಿ, ಸಿಎಎ ಮತ್ತು ಎನ್ಪಿಆರ್ ಹಿಂಪಡೆಯುವಂತೆ ಹಾಗೂ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಕಲಬುರಗಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದರು.
ಪೌರತ್ವ (ತಿದ್ದುಪಡಿ) ಕಾಯ್ದೆ ಹಿಂಪಡೆಯುವಂತೆ ಹಾಗೂ ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
ನಗರದ ಜಗತ್ ವೃತ್ತದಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದ ಭಾರತ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಎನ್ಆರ್ಸಿ,ಸಿಎಎ, ಎನ್ಪಿಆರ್ ಹೊಸ ವಿಧಾನದ ಕಾಯ್ದೆಗಳಾಗಿವೆ. ಕೂಡಲೇ ಈ ಕಾಯ್ದೆಗಳನ್ನು ಹಿಂಪಡೆಯುವಂತೆ ಹಾಗೂ ರೈತರು ಬೆಳೆದ ತೊಗರಿಗೆ 7,500 ರೂ. ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿದರು.