ಕಲಬುರಗಿ: ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ಕೆಲ ಬಡಾವಣೆಯ ನಾಗರಿಕರು ಕಲಬುರಗಿ ಮಹಾನಗರ ಪಾಲಿಕೆಗೆ ಮುತ್ತಿಗೆ ಹಾಕುವ ಮೂಲಕ ಪ್ರತಿಭಟಿಸಿದರು.
ಸಮರ್ಪಕ ಕುಡಿಯುವ ನೀರಿನ ಪೂರೈಕೆಗೆ ಆಗ್ರಹಿಸಿ ಬಿಂದಿಗೆ ಹಿಡಿದು ಪ್ರತಿಭಟನೆ - kannadanews
ಸಮರ್ಪಕ ಕುಡಿಯುವ ನೀರಿಗಾಗಿ ಆಗ್ರಹಿಸಿ ನಾಗರಿಕರು ಬಿಂದಿಗೆ ಹಿಡಿದು ಪ್ರತಿಭಟನೆ ನಡೆಸಿದ್ದು, ಕಲಬುರಗಿ ಮಹಾನಗರ ಪಾಲಿಕೆಗೆ ಮುತ್ತಿಗೆ ಹಾಕಿದ್ದಾರೆ.
ಕುಡಿಯುವ ನೀರಿಗಾಗಿ ಆಗ್ರಹಿಸಿ ಪ್ರತಿಭಟನೆ
ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ್ ನೇತೃತ್ವದಲ್ಲಿ ಪಾಲಿಕೆಗೆ ಮುತ್ತಿಗೆ ಹಾಕಿದ ನಾಗರಿಕರು, ಸಿಬ್ಬಂದಿಯ ಕಾರ್ಯವೈಖರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಸವೇಶ್ವರ ನಗರ, ಮೆಹಬೂಬ ನಗರ, ಗುಬ್ಬಿ ಕಾಲೋನಿ ಮತ್ತಿತರ ಬಡಾವಣೆ ನಿವಾಸಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿ ವಾರಕ್ಕೊಮ್ಮೆಯೂ ಸಮರ್ಪಕವಾಗಿ ನೀರು ಪೂರೈಕೆ ಮಾಡುತ್ತಿಲ್ಲ ಎಂದು ಆರೋಪಿಸಿರು. ಕೂಡಲೇ ಸಮರ್ಪಕ ನೀರು ಪೂರೈಕೆ ಮಾಡುವಂತೆ ಜಿಲ್ಲಾಡಳಿತಕ್ಕೆ ಒತ್ತಾಯಿಸಿದರು.