ಕಲಬುರಗಿ:ಉತ್ತರಪ್ರದೇಶದ ವಾರಣಾಸಿಯಲ್ಲಿ ಪ್ರಿಯಾಂಕಾ ಗಾಂಧಿ ಬಂಧನ ಖಂಡಿಸಿ ಕಲಬುರ್ಗಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರಿಯಾಂಕ ಗಾಂಧಿ ಬಂಧನ ಖಂಡಿಸಿ ಪ್ರತಿಭಟನೆ .. ಬಿಜೆಪಿ ವಿರುದ್ಧ ಕೈ ಕಾರ್ಯಕರ್ತರ ಆಕ್ರೋಶ - ಪ್ರಿಯಾಂಕ ಗಾಂಧಿ
ಉತ್ತರ ಪ್ರದೇಶದ ವಾರಣಾಸಿಯಲ್ಲಿ ಪ್ರಿಯಾಂಕಾ ಗಾಂಧಿ ಬಂಧನ ಖಂಡಿಸಿ ಕಲಬುರ್ಗಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಬಿಜೆಪಿಯ ಚೇಲಾಗಳಂತೆ ಉತ್ತರ ಪ್ರದೇಶ ಪೊಲೀಸರು ವರ್ತಿಸುತ್ತಿದ್ದು, ಕೂಡಲೇ ಪ್ರಿಯಾಂಕಾ ಗಾಂಧಿಯನ್ನು ಬೇಷರತ್ತಾಗಿ ಬಿಡುಗಡೆ ಮಾಡುವಂತೆ ಆಗ್ರಹಿದರು.
ಪ್ರಿಯಾಂಕ ಗಾಂಧಿ ಬಂಧನ ಖಂಡಿಸಿ ಪ್ರತಿಭಟನೆ
ಕಾಂಗ್ರೆಸ್ ಕಚೇರಿಯಿಂದ ಟೌನ್ ಹಾಲ್ವರೆಗೆ ಮೆರವಣಿಗೆಯಲ್ಲಿ ಆಗಮಿಸಿದ ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟಿಸಿದರು. ಉತ್ತರಪ್ರದೇಶದ ಯೋಗಿ ಆದಿತ್ಯನಾಥ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಬಿಜೆಪಿ ಕುಮ್ಮಕ್ಕಿನಿಂದ ಪ್ರಿಯಾಂಕಾಂ ಗಾಂಧಿ ಬಂಧನವಾಗಿದೆ ಎಂದು ಆರೋಪಿಸಿದರು. ಬಿಜೆಪಿಯ ಚೇಲಾಗಳಂತೆ ಉತ್ತರಪ್ರದೇಶ ಪೊಲೀಸರು ವರ್ತಿಸುತ್ತಿದ್ದು, ಕೂಡಲೇ ಪ್ರಿಯಾಂಕಾಂ ಗಾಂಧಿಯನ್ನು ಬೇಷರತ್ತಾಗಿ ಬಿಡುಗಡೆ ಮಾಡುವಂತೆ ಆಗ್ರಹಿದರು.