ಕಲಬುರಗಿ:ವಿಮಾನ ನಿಲ್ದಾಣದ ಆವರಣದಲ್ಲಿದ್ದ ದೇವಸ್ಥಾನವನ್ನು ನೆಲಸಮ ಮಾಡಲಾಗಿದೆ ಎಂದು ಆರೋಪಿಸಿ ಮಡಿಹಾಳ ತಾಂಡಾ ಹಾಗೂ ಶ್ರೀನಿವಾಸ ಸರಡಗಿ ಗ್ರಾಮಸ್ಥರು ಶುಕ್ರವಾರದಂದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇವಾಲಯ ನೆಲಸಮ ಆರೋಪ: ಕಲಬುರಗಿಯಲ್ಲಿ ಪ್ರತಿಭಟನೆ - latest kalburagi protest news
ವಿಮಾನ ನಿಲ್ದಾಣದ ಆವರಣದಲ್ಲಿದ್ದ ದೇವಸ್ಥಾನವನ್ನು ನೆಲಸಮ ಮಾಡಲಾಗಿದೆ ಎಂದು ಆರೋಪಿಸಿ ಮಡಿಹಾಳ ತಾಂಡಾ ಹಾಗೂ ಶ್ರೀನಿವಾಸ ಸರಡಗಿ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
![ದೇವಾಲಯ ನೆಲಸಮ ಆರೋಪ: ಕಲಬುರಗಿಯಲ್ಲಿ ಪ್ರತಿಭಟನೆ](https://etvbharatimages.akamaized.net/etvbharat/prod-images/768-512-5151025-thumbnail-3x2-klb.jpg)
ದೇವಾಲಯ ನೆಲಸಮವನ್ನು ಖಂಡಿಸಿ ಕಲಬುರಗಿಯಲ್ಲಿ ಪ್ರತಿಭಟನೆ !
ದೇವಾಲಯ ನೆಲಸಮ ಖಂಡಿಸಿ ಕಲಬುರಗಿಯಲ್ಲಿ ಪ್ರತಿಭಟನೆ
ವಿಮಾನ ನಿಲ್ದಾಣಕ್ಕಾಗಿ ತಾಂಡಾದ ಭೂಮಿ ಬಿಟ್ಟುಕೊಡಲಾಗಿದೆ. ಆದ್ರೆ, ಈ ಪ್ರದೇಶದಲ್ಲಿದ್ದ ಜಗದಂಬಾ ದೇವಸ್ಥಾನ ನೆಲಸಮಗೊಳಿಸಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿ ಮಡಿಹಾಳ ತಾಂಡಾ ಬಳಿ ರಸ್ತೆ ತಡೆದು ಪ್ರತಿಭಟನೆ ಮಾಡಿದರು. ವಿಮಾನ ನಿಲ್ದಾಣ ಪ್ರಾಧಿಕಾರದ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು, ದೇವಸ್ಥಾನ ಇದ್ದ ಸ್ಥಳದಲ್ಲಿಯೇ ಮರು ನಿರ್ಮಾಣಕ್ಕೆ ಆಗ್ರಹಿಸಿದರು. ಬಳಿಕ ಪೊಲೀಸ್ ಅಧಿಕಾರಿಗಳು ಮತ್ತಿತರರು ಗ್ರಾಮಸ್ಥರ ಮನವೊಲಿಕೆಗೆ ಯತ್ನ ನಡಸಿದರು.