ಕರ್ನಾಟಕ

karnataka

ETV Bharat / state

ಕಲಬುರಗಿ: ಚೀನಾ ಅಧ್ಯಕ್ಷರ ಭಾವಚಿತ್ರಕ್ಕೆ ಬೆಂಕಿ ಇಟ್ಟು ಪ್ರತಿಭಟನೆ

ಗಡಿ ಪ್ರದೇಶದಲ್ಲಿ ನಡೆದ ಭಾರತ-ಚೀನಾ ಸಂಘರ್ಷದಲ್ಲಿ ಚೀನಾ ನಡೆಗೆ ಭಾರತೀಯರು ಅಸಮಧಾನ ವ್ಯಕ್ತಪಡಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಕರ್ನಾಟಕ ನವನಿರ್ಮಾಣ ಸೇನೆ ಕಾರ್ಯಕರ್ತರು, ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟಿಸಿ, ಚೀನಾ ಅಧ್ಯಕ್ಷರ ಭಾವಚಿತ್ರ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.

By

Published : Jun 18, 2020, 4:23 PM IST

Protest in kalaburagi
Protest in kalaburagi

ಕಲಬುರಗಿ:ಜಿಲ್ಲೆಯಲ್ಲಿ ಚೀನಾ ವಿರುದ್ಧದ ಆಕ್ರೋಶ ಮುಂದುವರೆದಿದೆ. ಚೀನಾ ಅಧ್ಯಕ್ಷರ ಭಾವಚಿತ್ರಕ್ಕೆ ಬೆಂಕಿ ಇಟ್ಟು ಪ್ರತಿಭಟನೆ ನಡೆಸಲಾಯಿತು.

ಕರ್ನಾಟಕ ನವನಿರ್ಮಾಣ ಸೇನೆ ಕಾರ್ಯಕರ್ತರು, ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು. ಚೀನಾ ಅಧ್ಯಕ್ಷನ ಭಾವಚಿತ್ರಕ್ಕೆ ಬೆಂಕಿ ಇಟ್ಟ ಕಾರ್ಯಕರ್ತರು, ಚೀನಾಗೆ ತಕ್ಕ ಉತ್ತರ ನೀಡುವಂತೆ ಆಗ್ರಹಿಸಿದರು.

ಗಡಿ ಪ್ರದೇಶದಲ್ಲಿ ನಡೆದ ಭಾರತ-ಚೀನಾ ಸಂಘರ್ಷದಲ್ಲಿ ಚೀನಾ ನಡೆಗೆ ಭಾರತೀಯರು ಅಸಮಧಾನ ವ್ಯಕ್ತಪಡಿಸಿದ್ದಾರೆ. ಸದ್ಯ ಜಿಲ್ಲೆಯಲ್ಲಿ ಚೀನಾ ದೇಶದ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು, ದೇಶದಲ್ಲಿರುವ ಚೀನಿಗಳನ್ನು ಮಟ್ಟ ಹಾಕುವಂತೆ ಆಕ್ರೋಶ ಹೊರಹಾಕಿದರು.

ABOUT THE AUTHOR

...view details