ಕಲಬುರಗಿ: ದಾದರ್‌ನಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಅವರ ರಾಜಗೃಹದ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ ಕಲಬುರಗಿ ಜಿಲ್ಲೆಯ ವಿವಿಧೆಡೆ ಡಿಎಸ್‌ಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಅಂಬೇಡ್ಕರ್ ರಾಜಗೃಹದ ಮೇಲಿನ ದಾಳಿ ಖಂಡಿಸಿ ಕಲಬುರಗಿಯಲ್ಲಿ ಪ್ರತಿಭಟನೆ - ದಾದರ್ ನಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ರಾಜಗೃಹದ ಮೇಲೆ ದಾಳಿ
ಡಾ.ಬಿ.ಆರ್.ಅಂಬೇಡ್ಕರ್ ಅವರ ರಾಜಗೃಹದ ಮೇಲೆ ಕಿಡಿಗೇಡಿಗಳು ದಾಳಿ ಮಾಡಿರುವುದನ್ನು ಖಂಡಿಸಿ ಕಲಬುರಗಿ ಜಿಲ್ಲೆಯ ವಿವಿಧೆಡೆ ಡಿ ಎಸ್ ಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
Protest
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಕಾರ್ಯಕರ್ತರು ಕೇಂದ್ರ ಹಾಗೂ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಅಂಬೇಡ್ಕರ್ ಹೆಸರಿಗೆ ಮಸಿ ಬಳಿಯುವ ಉದ್ದೇಶದಿಂದ ಪ್ರತಿಮೆಗೆ ಅವಮಾನ ಮಾಡುತ್ತಿದ್ದರು. ಇದೀಗ ಅಂಬೇಡ್ಕರ್ ಅವರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಸರ್ಕಾರ ಸುಮ್ಮನೆ ಕುಳಿತಿರುವುದು ದುರಂತ, ಕೂಡಲೇ ಘಟನೆಗೆ ಕಾರಣರಾದವರನ್ನು ಪತ್ತೆ ಹಚ್ಚಿ, ಆರೋಪಿಗಳನ್ನು ದೇಶದಿಂದ ಗಡಿಪಾರು ಮಾಡಬೇಕು ಹಾಗೂ ಮಹಾರಾಷ್ಟ್ರ ಗೃಹ ಸಚಿವರು ರಾಜಿನಾಮೆ ನೀಡುವಂತೆ ಆಗ್ರಹಿಸಿದರು.
TAGGED:
DSS activist protest news