ಕಲಬುರಗಿ :ಭಾರತೀಯ ರೈಲ್ವೆ ಖಾಸಗೀಕರಣ ವಿರೋಧಿಸಿ ಎಸ್‌ಯುಸಿಐ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ರೈಲ್ವೆ ಖಾಸಗೀಕರಣ ವಿರೋಧಿಸಿ ಕಲಬುರಗಿಯಲ್ಲಿ ಪ್ರತಿಭಟನೆ - ಎಸ್.ಯು.ಸಿ.ಐ. ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ
ಭಾರತೀಯ ರೈಲ್ವೆ ಜನರ ತೆರಿಗೆ ಹಣದಿಂದ ರೂಪಿಸಿದ ಸಾರ್ವಜನಿಕ ಉದ್ಯಮ. ಬಡವರ, ಜನಸಾಮಾನ್ಯರ ಸಾರಿಗೆ ವ್ಯವಸ್ಥೆಯಾಗಿರೋ ರೈಲ್ವೆ ಇಲಾಖೆ ದುರ್ಬಲಗೊಳಿಸುವ ಹುನ್ನಾರ ಕೇಂದ್ರ ಸರ್ಕಾರ ಮಾಡುತ್ತಿದೆ..
ಎಸ್.ಯು.ಸಿ.ಐ. ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ..
ಕಲಬುರಗಿಯ ರೈಲ್ವೆ ನಿಲ್ದಾಣದ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಭಾರತೀಯ ರೈಲ್ವೆ ಜನರ ತೆರಿಗೆ ಹಣದಿಂದ ರೂಪಿಸಿದ ಸಾರ್ವಜನಿಕ ಉದ್ಯಮವಾಗಿದೆ.
ಬಡವರ, ಜನಸಾಮಾನ್ಯರ ಸಾರಿಗೆ ವ್ಯವಸ್ಥೆಯಾಗಿರೋ ರೈಲ್ವೆ ಇಲಾಖೆಯನ್ನು ದುರ್ಬಲಗೊಳಿಸುವ ಹುನ್ನಾರ ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿದರು. ಕೂಡಲೇ ರೈಲ್ವೆ ಖಾಸಗೀಕರಣ ಪ್ರಕ್ರಿಯೆ ನಿಲ್ಲಿಸುವಂತೆ ಅವರು ಆಗ್ರಹಿಸಿದರು.