ಕಲಬುರಗಿ: ಕೊರೊನಾ ಫ್ರಂಟ್ ಲೈನ್ ವಾರಿಯರ್ಸ್ ಸೇವೆ ಖಾಯಂಗೊಳಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ನೇತೃತ್ವದಲ್ಲಿ ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಕೊರೊನಾ ಫ್ರಂಟ್‌ಲೈನ್ ವಾರಿಯರ್ಸ್ ಸೇವೆ ಖಾಯಂಗೊಳಿಸಲು ಕಲಬುರಗಿಯಲ್ಲಿ ಪ್ರತಿಭಟನೆ
ಕೊರೊನಾ ಫ್ರಂಟ್ ಲೈನ್ ವಾರಿಯರ್ಸ್ ಸೇವೆ ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಲಬುರಗಿಯಲ್ಲಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯ್ತು.
ಪ್ರತಿಭಟನೆ
ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟಿಸಿದ ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಯೋಜನಾ ನೌಕರರಿಗೆ ಪ್ರೋತ್ಸಾಹ ಧನ ನೀಡಬೇಕು,ಉದ್ಯೋಗ ಖಾತ್ರಿ ಯೋಜನೆ 200 ದಿನಕ್ಕೆ ವಿಸ್ತರಿಸಬೇಕು. ಲಾಕ್ಡೌನ್ ಸಂದರ್ಭದ ಸಂಪೂರ್ಣ ವೇತನ ಬಿಡುಗಡೆ ಮಾಡಬೇಕು ಒತ್ತಾಯಿಸಿದ್ರು.
ಕೋವಿಡ್-19 ಅನ್ನು ವೈದ್ಯಕೀಯ ತುರ್ತು ಸ್ಥಿತಿ ಎಂದು ಪರಿಗಣಿಸಬೇಕು ಜೊತೆಗೆ ಖಾಸಗೀಕರಣದ ನಡೆ ಕೈಬಿಡುವುದು ಸೇರಿ ಇತರೆ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಡಿಸಿ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.