ಸೇಡಂ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸನ್ಯಾಸಿಯಾಗಿ ಮಠದಲ್ಲಿರಲಿ, ಸಿಎಂ ಆಗಿರಲು ಅವರು ಯೋಗ್ಯರಲ್ಲ ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಡಾ.ಶರಣಪ್ರಕಾಶ ಪಾಟೀಲ ಗುಡುಗಿದ್ದಾರೆ.
ಯೋಗಿ ಆದಿತ್ಯನಾಥ ಸನ್ಯಾಸಿಯಾಗಿ ಮಠದಲ್ಲಿರಲಿ, ಸಿಎಂ ಆಗಿರಲು ಯೋಗ್ಯರಲ್ಲ: ಡಾ.ಶರಣಪ್ರಕಾಶ ಪಾಟೀಲ - Protest in Sedam
ಯುಪಿಯಲ್ಲಿ ಅತ್ಯಾಚಾರಿಗಳನ್ನು ರಕ್ಷಿಸುವಂತಹ ಕೆಲಸವನ್ನು ಮುಖ್ಯಮಂತ್ರಿ ಆದಿತ್ಯನಾಥ ಸರ್ಕಾರ ಮಾಡುತ್ತಿದೆ. ದಲಿತರ ಮೇಲೆ ಹೆಚ್ಚಿನ ದೌರ್ಜನ್ಯಗಳು ನಡೆಯುತ್ತಿವೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸನ್ಯಾಸಿಯಾಗಿ ಮಠದಲ್ಲಿರಲಿ, ಅವರು ಸಿಎಂ ಆಗಿರಲು ಯೋಗ್ಯರಲ್ಲ ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಡಾ.ಶರಣಪ್ರಕಾಶ ಪಾಟೀಲ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಥ್ರಾಸ್ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ಸೇಡಂನ ಅಂಬೇಡ್ಕರ್ ಸರ್ಕಲ್ ಬಳಿ ಕೈಗೊಂಡ ಮೌನ ಪ್ರತಿಭಟನೆಯ ವೇಳೆ ಅವರು ಯುಪಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಯುಪಿಯಲ್ಲಿ ಅತ್ಯಾಚಾರಿಗಳನ್ನು ರಕ್ಷಿಸುವಂತಹ ಕೆಲಸವನ್ನು ಆದಿತ್ಯನಾಥ ಸರ್ಕಾರ ಮಾಡುತ್ತಿದೆ. ದಲಿತರ ಮೇಲೆ ಹೆಚ್ಚಿನ ದೌರ್ಜನ್ಯಗಳು ಜರುಗುತ್ತಿದ್ದು, ಜನರನ್ನು ರಕ್ಷಿಸುವಲ್ಲಿ ಅಲ್ಲಿನ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
ಹಥ್ರಾಸ್ ಗ್ರಾಮಕ್ಕೆ ಭೇಟಿ ನೀಡಲು ಮುಂದಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರನ್ನು ತಡೆದು, ಅವರೊಂದಿಗೆ ಪೊಲೀಸರು ಹೀನಾಯವಾಗಿ ವರ್ತಿಸಿದ್ದಾರೆ. ಕೂಡಲೇ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.