ಕಲಬುರಗಿ: ಆರೋಗ್ಯ ಇಲಾಖೆ ನಿರ್ಲಕ್ಷ್ಯದಿಂದ ಸಾರಿಗೆ ಬಸ್ ಚಾಲಕ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಕೆಎಸ್ಆರ್ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಫೆಡರೇಷನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಆರೋಗ್ಯ ಇಲಾಖೆ ನಿರ್ಲಕ್ಷ್ಯದಿಂದ ಚಾಲಕ ಸಾವು; ಕೆಎಸ್ಆರ್ಟಿಸಿ ಸಿಬ್ಬಂದಿ ಪ್ರತಿಭಟನೆ... - ಕಲಬುರಗಿ
ಆರೋಗ್ಯ ಇಲಾಖೆ ನಿರ್ಲಕ್ಷ್ಯದಿಂದ ಸಾರಿಗೆ ಬಸ್ ಚಾಲಕ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಕೆಎಸ್ಆರ್ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಫೆಡರೇಷನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನಾಕಾರರು ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸಾರಿಗೆ ಬಸ್ ಚಾಲಕ ರಾಮು ಗುತ್ತೇದಾರ ಕೋವಿಡ್ ಸೋಂಕು ಕಂಡುಬಂದ ಕೂಡಲೇ ಜಿಮ್ಸ್ ಆಸ್ಪತ್ರೆಗೆ ಹೋಗಿದ್ದಾರೆ. ಆದರೆ ಜಿಮ್ಸ್ನಲ್ಲಿ ಮೂರು ತಾಸು ವಿಳಂಬ ಮಾಡಿ ಅಡ್ಮಿಟ್ ಮಾಡಿಕೊಳ್ಳಲಾಗಿದೆ. ನಂತರ ವೆಂಟಿಲೇಟರ್ ಅಗತ್ಯವಿದ್ದರೂ ವ್ಯವಸ್ಥೆ ಮಾಡದೆ ನಿರ್ಲಕ್ಷ್ಯ ವಹಿಸಲಾಗಿದೆ. ಆರೋಗ್ಯ ಇಲಾಖೆ ನಿರ್ಲಕ್ಷ್ಯದಿಂದ ಚಾಲಕ ರಾಮು ಗುತ್ತೇದಾರ ಸಾವನ್ನಪ್ಪಿದ್ದಾನೆ ಎಂದು ಸಾರಿಗೆ ಸಿಬ್ಬಂದಿ ಆರೋಪಿಸಿದರು.
ಇನ್ನು ಮೃತ ಚಾಲಕನ ಕುಟುಂಬಕ್ಕೆ ಒಂದು ಕೋಟಿ ಪರಿಹಾರ ನೀಡಬೇಕು. ಕೋವಿಡ್ ಆಸ್ಪತ್ರೆಗಳ ವ್ಯವಸ್ಥೆ ಸರಿಪಡಿಸಬೇಕು. ಸಾರಿಗೆ ನೌಕರರಿಗಾಗಿಯೇ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಆರಂಭಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಲಾಯಿತು.