ಕಲಬುರಗಿ: ನಗರದಲ್ಲಿ ಕ್ರಿಕೆಟ್ ಬೆಟ್ಟಿಂಗ್, ಗಾಂಜಾ ಮಾರಾಟ ಮತ್ತು ಜೂಜಾಟ ವ್ಯಾಪಕವಾಗಿದೆ ಎಂದು ಆರೋಪಿಸಿ ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ ನೇತೃತ್ವದಲ್ಲಿ ಪ್ರತಿಭಟನೆ - Protest in kalaburagi
ಐಪಿಎಲ್ ಬೆಟ್ಟಿಂಗ್, ಇಸ್ಪೀಟ್, ಜೂಜು, ಮಟ್ಕಾ, ಗಾಂಜಾ ಮಾರಾಟ ವ್ಯಾಪಕವಾಗಿದೆ. ಆದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ..
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ ನೇತೃತ್ವದಲ್ಲಿ ಪ್ರತಿಭಟನೆ
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು. ಐಪಿಎಲ್ ಬೆಟ್ಟಿಂಗ್, ಇಸ್ಪೀಟ್, ಜೂಜು, ಮಟ್ಕಾ, ಗಾಂಜಾ ಮಾರಾಟ ವ್ಯಾಪಕವಾಗಿದೆ. ಆದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲವೆಂದು ಪ್ರತಿಭಟನಾಕಾರರು ಆರೋಪಿಸಿದರು.
ಕ್ರಿಕೆಟ್ಗೆ ಸಂಬಂಧಿಸಿ ಸೋಲಾಪುರ ಪೊಲೀಸರು ದಾಳಿ ಮಾಡಿದ್ದರೂ ಕಲಬುರಗಿ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಒತ್ತಾಯಿಸಿದರು. ಇಲ್ಲದಿದ್ದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.