ಕಲಬುರಗಿ:ದೆಹಲಿಯಲ್ಲಿ ನಡೆಯುತ್ತಿರುವ ರೈತರ ಧರಣಿ ಬೆಂಬಲಿಸಿ ಹಾಗೂ ಕೃಷಿ ಕಾಯ್ದೆ ರದ್ಧತಿಗೆ ಒತ್ತಾಯಿಸಿ ನಗರದಲ್ಲಿ ನಡೆಯುತ್ತಿರುವ ನಿರಂತರ ಧರಣಿ ಸತ್ಯಾಗ್ರಹ ಸ್ಥಳದಲ್ಲಿ ಮೋದಿಯವರ ಪ್ರತಿಕೃತಿಗೆ ನೇಣು ಹಾಕಿ ವಿನೂತವಾಗಿ ಪ್ರತಿಭಟನೆ ನಡೆಸಿದರು.
ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ಕಲಬುರಗಿಯಲ್ಲಿ ವಿನೂತನ ಪ್ರತಿಭಟನೆ - ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ
ಕೇಂದ್ರ ಸರ್ಖಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ವಿರೊಧಿಸಿ ಕಲಬುರಗಿಯಲ್ಲಿ ಪ್ರತಿಭಟನಾಕಾರರು ವಿನೂತನವಾಗಿ ಪ್ರತಿಭಟನೆ ನಡೆಸಿದರು.
![ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ಕಲಬುರಗಿಯಲ್ಲಿ ವಿನೂತನ ಪ್ರತಿಭಟನೆ ಕಲಬುರಗಿಯಲ್ಲಿ ವಿನೂತನ ಪ್ರತಿಭಟನೆ](https://etvbharatimages.akamaized.net/etvbharat/prod-images/768-512-9953594-thumbnail-3x2-bng.jpg)
ನಗರದ ಜಗತ್ ವೃತ್ತದಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆ ಎದುರು ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಕೃತಿಗೆ ನೇಣು ಹಾಕುವ ಮೂಲಕ ಕಾರ್ಯಕರ್ತರು ಬೊಬ್ಬೆ ಹಾಕಿ ಪ್ರತಿಭಟನೆ ನಡೆಸಿದರು. ಬಿಜೆಪಿ ಸರ್ಕಾರ ರೈತ ವಿರೋಧಿ ಕಾನೂನು ಜಾರಿಗೆ ತರುವ ಮೂಲಕ ದೇಶದ ಬೆನ್ನೆಲುಬಾದ ರೈತರನ್ನು ತುಳಿಯಲು ಹೊರಟಿದೆ ಎಂದು ಆರೋಪಿಸಿದರು.
ಜನ ವಿರೋಧಿ, ರೈತ ವಿರೋಧಿ ಮತ್ತು ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತಂದು ಸರ್ಕಾರ ಉಳ್ಳವರ ಪರವಾಗಿ ಕೆಲಸ ಮಾಡುತ್ತಿದೆ. ಕೂಡಲೇ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಹಾಗೂ ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಧರಣಿನಿರತ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.