ಕಲಬುರಗಿ:ಹೆಸರು, ಉದ್ದು ಖರೀದಿ ಕೇಂದ್ರ ಸ್ಥಾಪನೆ ವಿಳಂಬ ಖಂಡಿಸಿ ಹಾಗೂ ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ರೈತ ಮುಖಂಡ ಮಾರುತಿ ಮಾನ್ಪಾಡೆ ನೇತೃತ್ವದಲ್ಲಿ ನಗರದ ಗಂಜ್ ಪ್ರದೇಶದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ ರೈತರು, ಬೆಳೆದ ಬೆಳೆಗೆ ಕೇಂದ್ರ ಸರ್ಕಾರ ಬೆಂಬಲ ಬೆಲೆ ನೀಡುತ್ತಿಲ್ಲ, ಉದ್ದು, ಹೆಸರು ಖರೀದಿ ಕೇಂದ್ರ ಸ್ಥಾಪಿಸುವುದಾಗಿ ಹೇಳಿ ಇನ್ನು ಖರೀದಿ ಕೇಂದ್ರ ಸ್ಥಾಪಿಸದೆ ವಿಳಂಬ ನೀತಿ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿದರು.