ಕರ್ನಾಟಕ

karnataka

ETV Bharat / state

ಭೀಮಾ ನದಿ ಪ್ರವಾಹ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಲು ಆಗ್ರಹ

ಭೀಕರ ಪ್ರವಾಹದಿಂದ ಬೆಳೆ ಹಾನಿ ಸಂಭವಿಸಿ ಭೀಮಾ ನದಿ ಪಾತ್ರದ ರೈತರು ಅಪಾರ ನಷ್ಟ ಅನುಭವಿಸಿದ್ದು, ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರ ಕೂಡಲೇ ಸೂಕ್ತ ಪರಿಹಾರ ನೀಡಬೇಕು ಎಂದು ಕಮ್ಯೂನಿಸ್ಟ್​​ ಪಕ್ಷದ ನಾಯಕರು ಆಗ್ರಹಿಸಿದ್ದಾರೆ.

ಸಿಪಿಐ ಆಗ್ರಹ

By

Published : Aug 25, 2019, 8:55 PM IST

ಕಲಬುರಗಿ: ಭೀಕರ ಪ್ರವಾಹದಿಂದ ಬೆಳೆ ಹಾನಿ ಸಂಭವಿಸಿ ಭೀಮಾ ನದಿ ಪಾತ್ರದ ರೈತರು ಸಂಕಷ್ಟ ಎದುರಿಸುತ್ತಿದ್ದು,‌ ಸರ್ಕಾರ ಕೂಡಲೇ ಸೂಕ್ತ ಬೆಳೆ ಪರಿಹಾರ ನೀಡುವಂತೆ ಭಾರತೀಯ ಕಮ್ಯೂನಿಸ್ಟ್‌ ಪಕ್ಷ (ಸಿಪಿಐ) ರಾಜ್ಯ ಕಾರ್ಯದರ್ಶಿ ಡಾ. ಕೆ.ಎಸ್.ಜನಾರ್ಧನ್ ಆಗ್ರಹಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ರಾಜ್ಯದ ಹಲವು ಭಾಗಗಳಲ್ಲಿ ಪ್ರವಾಹ ಬಂದು ರೈತರ ಬೆಳೆ ಸಂಪೂರ್ಣ ನಾಶವಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಬೆಳೆ ಪರಿಹಾರ ನೀಡುವ ಮೂಲಕ ಭೀಮಾ ನದಿ ಪಾತ್ರದ ರೈತರಿಗೆ ನೆರವಾಗಬೇಕು. ಕೂಡಲೇ ಕೇಂದ್ರ ಸರ್ಕಾರ ಐದು ಸಾವಿರ ಕೋಟಿ ಅನುದಾನ ಬಿಡುಗಡೆ ಮಾಡಿ ಪ್ರವಾಹದಿಂದ ಹಾನಿ ಅನುಭವಿಸಿರುವ ರೈತರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡಲು ಆಗ್ರಹ

ಇನ್ನು ರಾಜ್ಯದ ವಿವಿಧ ತಾಲೂಕುಗಳಲ್ಲಿ ಇಂದಿಗೂ ಬರ ತಾಂಡವವಾಡುತ್ತಿದ್ದು, ಕುಡಿಯುವ ನೀರಿಗೆ ಜನ ಪರದಾಡುವಂತಾಗಿದೆ. ಆದ್ದರಿಂದ ಸರ್ಕಾರ ಜನರ ಕಷ್ಟಕ್ಕೆ ಸ್ಪಂದಿಸಬೇಕು ಎಂದು ಆಗ್ರಹಿಸಿದರು.

ABOUT THE AUTHOR

...view details