ಕರ್ನಾಟಕ

karnataka

By

Published : Apr 27, 2022, 6:03 PM IST

ETV Bharat / state

ದಿವ್ಯಾ ಹಾಗರಗಿ ನಿರೀಕ್ಷಣಾ ಜಾಮೀನಿಗೆ ಸಿಐಡಿ ತಕಾರರು ಅರ್ಜಿ: ಏಪ್ರಿಲ್ 29ಕ್ಕೆ ವಿಚಾರಣೆ

ದಿವ್ಯಾ ಹಾಗರಗಿ, ಕಾಶಿನಾಥ್, ಮಂಜುನಾಥ ಮೇಳಕುಂದಿ, ಅರ್ಚನಾ ಹೊನಗೇರಿ, ಸುನಂದಾ ಅವರ ಜಾಮೀನಿಗೆ ಸಿಐಡಿ ತಕರಾರು ಅರ್ಜಿ ಸಲ್ಲಿಸಿದೆ.

ದಿವ್ಯಾ ಹಾಗರಗಿ
ದಿವ್ಯಾ ಹಾಗರಗಿ

ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದ ರೂವಾರಿ ಜ್ಞಾನಜ್ಯೋತಿ ಶಾಲೆಯ ಒಡತಿ ದಿವ್ಯಾ ಹಾಗರಗಿ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಗೆ ವಿರೋಧವಾಗಿ ಸಿಐಡಿ ಸಲ್ಲಿಸಿದ ತಕರಾರು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಏಪ್ರಿಲ್ 29ಕ್ಕೆ ನಿಗದಿ ಮಾಡಿದೆ.

ದಿವ್ಯಾ ಹಾಗರಗಿ, ಕಾಶಿನಾಥ್, ಮಂಜುನಾಥ ಮೇಳಕುಂದಿ, ಅರ್ಚನಾ ಹೊನಗೇರಿ, ಸುನಂದಾ ಅವರ ಜಾಮೀನಿಗೆ ಸಿಐಡಿ ತಕರಾರು ಅರ್ಜಿ ಸಲ್ಲಿಸಲಾಗಿದೆ. ಇದು ಸಂಘಟಿಕ ಅಪರಾಧ. ಜಾಮೀನು ಕೊಟ್ಟರೆ ಸಾಕ್ಷಿ ನಾಶಪಡಿಸುವ ಸಾಧ್ಯತೆ ಇದೆ. ಹೀಗಾಗಿ, ಈ ಐವರಿಗೆ ನಿರೀಕ್ಷಣಾ ಜಾಮೀನು ನೀಡಬೇಡಿ ಎಂದು ಕಲಬುರಗಿಯ ಜಿಲ್ಲಾ ನ್ಯಾಯಾಲಯಕ್ಕೆ ಸಿಐಡಿ ತಕರಾರು ಅರ್ಜಿ ಸಲ್ಲಿಸಿದೆ.

16ನೇ ಆರೋಪಿ ಸಿಐಡಿ ಕಸ್ಟಡಿಗೆ:ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಬ್ಲೂಟೂತ್ ಡಿವೈಸ್ ಬಳಕೆ ಮಾಡಿ ಪರೀಕ್ಷೆ ಬರೆದ ಆರೋಪದ ಮೇಲೆ‌ ನಿನ್ನೆ ಸಿಐಡಿ ಬಂಧಿಸಿದ 16ನೇ ಆರೋಪಿ ಎನ್.ವಿ.ಸುನೀಲ್ ‌ಎಂಬಾತನನ್ನು ವಿಚಾರಣೆಗಾಗಿ 8 ದಿನ ಸಿಐಡಿ ಕಸ್ಟಡಿಗೆ ನೀಡಿ 3ನೇ ಜೆಎಂಎಫ್​ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ದಾಖಲಾತಿ ಪರಿಶೀಲನೆ ಸಂದರ್ಭದಲ್ಲಿ ಸಿಐಡಿ ಬಲೆಗೆ ಬಿದ್ದಿದ್ದ ಸುನೀಲ್‌ ಎಂಬಾತನನ್ನು ಬೆಂಗಳೂರಿನ ಸಿಐಡಿ ಕಚೇರಿಯಲ್ಲೇ ಬಂಧಿಸಿ ಕಲಬುರಗಿಗೆ ತರಲಾಗಿತ್ತು.

ಇದನ್ನೂ ಓದಿ:ರಾಜ್ಯದಲ್ಲಿ ಅನಾವಶ್ಯಕ ಕೋವಿಡ್‌ ನಿರ್ಬಂಧ ಇಲ್ಲ: ಸಿಎಂ ಬೊಮ್ಮಾಯಿ

For All Latest Updates

TAGGED:

ABOUT THE AUTHOR

...view details