ಕರ್ನಾಟಕ

karnataka

ETV Bharat / state

ಪಿಎಸ್ಐ ಪರೀಕ್ಷಾ ಅಕ್ರಮ: ಮತ್ತೋರ್ವ ರ‍್ಯಾಂಕ್ ಅಭ್ಯರ್ಥಿ ಬಂಧನ - PSI exam

ಪಿಎಸ್​ಐ ಹಗರಣ ಸಂಬಂಧ ಮತ್ತೋರ್ವ ಅಭ್ಯರ್ಥಿಯನ್ನು ಬಂಧಿಸಲಾಗಿದೆ.

ಪಿಎಸ್ಐ ಪರೀಕ್ಷೆ ಅಕ್ರಮ
ಪಿಎಸ್ಐ ಪರೀಕ್ಷೆ ಅಕ್ರಮ

By

Published : Nov 3, 2022, 8:32 PM IST

ಕಲಬುರಗಿ:ಪಿಎಸ್​​ಐ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಅಭ್ಯರ್ಥಿಯನ್ನು ಸಿಐಡಿ ತಂಡ ಬಂಧಿಸಿದೆ. ಕಲ್ಯಾಣ‌ ಕರ್ನಾಟಕ ಮಹಿಳಾ ಮೀಸಲಾತಿಯಲ್ಲಿ ಸ್ಥಾನ ಪಡೆದಿದ ಸುಪ್ರೀಯಾ ಹುಂಡೆಕಾರ (26) ಬಂಧಿತ ಅಭ್ಯರ್ಥಿ.

ಕಿಂಗ್ ಪಿನ್ ಆರ್.ಡಿ.ಪಾಟೀಲ್ ಮೂಲಕ ಕಲಬುರಗಿಯ ಸರ್ಕಾರಿ ಪದವಿ ಕಾಲೇಜಿನಲ್ಲಿ ಬ್ಲೂ ಟೂತ್ ಬಳಸಿ ಪರೀಕ್ಷೆ ಬರೆದಿರುವ ಆರೋಪ ಸುಪ್ರೀಯಾ ಮೇಲಿದೆ. ಈ ಕುರಿತು ಗುಲಬರ್ಗಾ ವಿಶ್ವವಿದ್ಯಾಲಯದ ಪೊಲೀಸ್ ಠಾಣೆಯಲ್ಲಿ ಸಿಐಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಮೂಲಕ ಕಲಬುರಗಿಯಲ್ಲಿ ಬಂಧಿತರ ಸಂಖ್ಯೆ 52ಕ್ಕೆ ಏರಿದಂತಾಗಿದೆ.

ಪಿಎಸ್​ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮದ ಬಗ್ಗೆ ಸಿಐಡಿ ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ.

(ಓದಿ: ಪಿಎಸ್ಐ ನೇಮಕಾತಿ ಹಗರಣ: ಹೆಡ್ ಕಾನ್ಸ್​​ಟೇಬಲ್ ಸಿಐಡಿ ವಶಕ್ಕೆ)

ABOUT THE AUTHOR

...view details