ಕರ್ನಾಟಕ

karnataka

ETV Bharat / state

ಸಂಕಷ್ಟದಲ್ಲಿರುವ ರೈತರಿಗೆ ಉಚಿತ ಬೀಜ-ಗೊಬ್ಬರ ವಿತರಿಸುವಂತೆ ಸರ್ಕಾರಕ್ಕೆ ಆಗ್ರಹ

ಅತಿವೃಷ್ಟಿಯಿಂದ ಉದ್ದು, ಹೆಸರು, ಎಳ್ಳು ಬೆಳೆಗಳು ಹಾಳಾಗಿವೆ. ಜಮೀನುಗಳಲ್ಲಿ ನೀರು ನಿಂತಿದ್ದರಿಂದ ಜಿಲ್ಲೆಯ ವಾಣಿಜ್ಯ ಬೆಳೆ ತೊಗರಿ ಕೂಡ ಒಣಗಲು ಪ್ರಾರಂಭಿಸಿದೆ. ಪ್ರಮುಖ ಬೆಳೆಗಳು ಕೈಕೊಟ್ಟಿರುವುದರಿಂದ ರೈತರಿಗೆ ಆರ್ಥಿಕವಾಗಿ ಸಂಕಷ್ಟ ಎದುರಾಗಿದೆ.

By

Published : Oct 10, 2020, 7:47 PM IST

request-the-government-to-distribute-free-seed-and-fertilizer-farmers
ಸಂಕಷ್ಟದಲ್ಲಿರುವ ರೈತರಿಗೆ ಉಚಿತ ಬೀಜ-ಗೊಬ್ಬರ ವಿತರಿಸುವಂತೆ ಸರ್ಕಾರಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯಲ್ಲಿ ಸುರಿದ ಭಾರಿ‌ ಮಳೆಯಿಂದ ರೈತಾಪಿ ವರ್ಗ ಸಂಕಷ್ಟ ಎದುರಿಸುತ್ತಿದ್ದು, ಸರ್ಕಾರ ಹಿಂಗಾರು ಬಿತ್ತನೆಗೆ ಉಚಿತ ಬೀಜ ಹಾಗೂ ರಸಗೊಬ್ಬರ ಒದಗಿಸುವಂತೆ ರೈತ ಮುಖಂಡ, ಕನ್ನಡ ಭೂಮಿ ಜಾಗೃತಿ ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಸಿರಗಾಪೂರ ಆಗ್ರಹಿಸಿದ್ದಾರೆ.

ಸಂಕಷ್ಟದಲ್ಲಿರುವ ರೈತರಿಗೆ ಉಚಿತ ಬೀಜ-ಗೊಬ್ಬರ ವಿತರಿಸುವಂತೆ ಸರ್ಕಾರಕ್ಕೆ ಆಗ್ರಹ

ಜಿಲ್ಲೆಯಾದ್ಯಂತ ಈ ಬಾರಿ ವಿಪರೀತ ಮಳೆ ಸುರಿದ ಪರಿಣಾಮ ಮುಂಗಾರು ಬೆಳೆಗಳು ನಾಶವಾಗಿವೆ. ಆದರಿಂದ ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರ ನೆರವಾಗಬೇಕು ಎಂದು ಸಿರಗಾಪೂರ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.

ಅತಿವೃಷ್ಟಿಯಿಂದ ಉದ್ದು, ಹೆಸರು, ಎಳ್ಳು ಬೆಳೆಗಳು ಹಾಳಾಗಿವೆ. ಜಮೀನುಗಳಲ್ಲಿ ನೀರು ನಿಂತಿದ್ದರಿಂದ ಜಿಲ್ಲೆಯ ವಾಣಿಜ್ಯ ಬೆಳೆ ತೊಗರಿ ಕೂಡ ಒಣಗಲು ಪ್ರಾರಂಭಿಸಿದೆ. ಪ್ರಮುಖ ಬೆಳೆಗಳು ಕೈಕೊಟ್ಟಿರುವುದರಿಂದ ರೈತರಿಗೆ ಆರ್ಥಿಕವಾಗಿ ಸಂಕಷ್ಟ ಎದುರಾಗಿದೆ. ಸಾಲಸೂಲ ಮಾಡಿ ಸಾವಿರಾರು ರೂಪಾಯಿ ಖರ್ಚು ಮಾಡಿ ಬಿತ್ತನೆ ಮಾಡಿದ ರೈತನಿಗೆ ಬೆಳೆ ಕೈಕೊಟ್ಟ ಹಿನ್ನೆಲೆ ರೈತರು ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣ ಹೆಚ್ಚುತ್ತಿವೆ.

ವಿಮೆ ಕಂಪನಿಗಳು ರೈತರ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡುತ್ತಿವೆ. ಇಡೀ ದೇಶಕ್ಕೆ ಅನ್ನ ನೀಡುವ ರೈತನ ಜೀವನ ಭದ್ರತೆಗೆ ಸರಕಾರ ಯಾವುದೇ ಯೋಜನೆ ರೂಪಿಸಿಲ್ಲ ಎಂದು ಅವರು ಆರೋಪಿಸಿದರು.

ABOUT THE AUTHOR

...view details